ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜ್ಯ ರಾಣಿ’ ಚಲಾಯಿಸಿದ ಮಹಿಳಾ ಸಾರಥಿಗಳು: ಕೇಂದ್ರ ಸಚಿವರಿಂದ ವಿಡಿಯೊ ಟ್ವೀಟ್‌

Last Updated 2 ಮಾರ್ಚ್ 2020, 5:09 IST
ಅಕ್ಷರ ಗಾತ್ರ

ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯು ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಬೆಂಗಳೂರು– ಮೈಸೂರು ನಡುವೆ ಓಡಾಡುವ ರಾಜ್ಯ ರಾಣಿ ಎಕ್ಸ್‌ಪ್ರೆಸ್‌ ರೈಲನ್ನು ಭಾನುವಾರ ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಿದ್ದಾರೆ.

ಈ ಬಗ್ಗೆ ಭಾನುವಾರ ಟ್ವೀಟ್‌ ಮಾಡಿರುವ ರೈಲ್ವೆ ಖಾತೆ ಸಚಿವ ಪೀಯೂಷ್‌ ಗೋಯಲ್‌ ಅವರು, ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಗೂ ಮುನ್ನವೇ ಮಹಿಳೆಯರ ಸಬಲೀಕರಣದತ್ತ ನಡೆ... ಬೆಂಗಳೂರು– ಮೈಸೂರು ರಾಜ್ಯ ರಾಣಿ ಎಕ್ಸ್‌ಪ್ರೆಸ್‌ ರೈಲನ್ನು ಇಂದು ಮಹಿಳಾ ಸಿಬ್ಬಂದಿಯೇ ಓಡಿಸಿದ್ದಾರೆ’ ಎಂದು ಟ್ವೀಟ್‌ ಮಾಡಿದ್ದಲ್ಲದೆ ಇಬ್ಬರು ಮಹಿಳೆಯರು ರೈಲು ಚಾಲಾಯಿಸುತ್ತಿರುವ, 48 ಸೆಕೆಂಡ್‌ಗಳ ವಿಡಿಯೊ ಒಂದನ್ನು ಪೋಸ್ಟ್‌ ಮಾಡಿದ್ದಾರೆ. ಮಧ್ಯಾಹ್ನದ ವೇಳೆಗಾಗಲೇ 40 ಸಾವಿರಕ್ಕೂ ಹೆಚ್ಚು ಜನರು ಆ ವಿಡಿಯೊವನ್ನು ನೋಡಿದ್ದಾರೆ.

ವಿಡಿಯೊ ಪೋಸ್ಟ್‌ಮಾಡಿದ ಕೆಲವೇ ಗಂಟೆಗಳಲ್ಲಿ ಅದಕ್ಕೆ 10 ಸಾವಿರಕ್ಕೂ ಹೆಚ್ಚು ಮೆಚ್ಚುಗೆಗಳು ಬಂದಿರುವುದಲ್ಲದೆ 2 ಸಾವಿರಕ್ಕೂ ಹೆಚ್ಚುಬಾರಿ ಮರು ಟ್ವೀಟ್‌ ಆಗಿದೆ. ‘ಇದೊಂದು ಅತ್ಯುತ್ತಮ ಬೆಳವಣಿಗೆ’ ಎಂದು ಹಲವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ‘ನಾವು ಖಚಿತವಾಗಿ ಅಭಿವೃದ್ಧಿ ಸಾಧಿಸು ತ್ತಿದ್ದೇವೆ’ ಎಂದು ಒಬ್ಬರು ಪ್ರತಿಕ್ರಿಯೆ ನೀಡಿದ್ದರೆ, ‘ಮಹಿಳೆಯರಿಗೆ ಇದು ಹೆಮ್ಮೆಯ ಹಾಗೂ ಪ್ರೋತ್ಸಾಹದಾಯಕ ವಿಚಾರ’ ಎಂದು ಇನ್ನೊಬ್ಬರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT