ಬೆಂಗಳೂರು: ಜೂನ್ 19 ರಂದು ನಡೆಯಲಿರುವ ರಾಜ್ಯ ಸಭೆಯ ದ್ವೈ-ವಾರ್ಷಿಕ ಚುನಾವಣೆಗೆಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಂ. ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ವಿಧಾನಸಭಾ ಕಾರ್ಯದರ್ಶಿಗಳೂ ಆದ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ಇಲ್ಲಿ ಇಂದು ನಾಮಪತ್ರ ಸಲ್ಲಿಸಿದರು

ರಾಜ್ಯ ವಿಧಾನ ಸಭೆಯಲ್ಲಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಆರ್.ವಿ. ದೇಶಪಾಂಡೆ ಅವರೂ ಈ ಸಂದರ್ಭದಲ್ಲಿ ಹಾಜರಿದ್ದರು.

ಇದನ್ನೂ ಓದಿ:ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ‘ಬಿ’ ಫಾರಂ

ಬೆಳಗ್ಗೆಯಷ್ಟೇ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯ ಬಳಿಕ ಖರ್ಗೆ ಅವರಿಗೆ ‘ಬಿ’ ಫಾರಂ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.