ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಲಿಕಾರ್ಜುನ ಖರ್ಗೆಗೆ ಒಲಿದ ರಾಜ್ಯಸಭೆ ಟಿಕೆಟ್‌

Last Updated 5 ಜೂನ್ 2020, 20:07 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 19 ರಂದು ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ತನ್ನ ಪಾಲಿಗೆ ದಕ್ಕಿರುವಒಂದು ಸ್ಥಾನಕ್ಕೆ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್‌ ನಿರ್ಧರಿಸಿದೆ.

ಕರ್ನಾಟಕ ವಿಧಾನಸಭಾ ಸದಸ್ಯರಿಂದ ಆಯ್ಕೆಯಾಗಬೇಕಾದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಎರಡು ಸ್ಥಾನಗಳು ಬಿಜೆಪಿ ಮತ್ತು ಒಂದು ಸ್ಥಾನ ಕಾಂಗ್ರೆಸ್‌ಗೆ‌ ಸಿಗಲಿದೆ. ಅಗತ್ಯ ಸಂಖ್ಯಾ ಬಲ ಹೊಂದಿಲ್ಲದ ಜೆಡಿಎಸ್, ತಮ್ಮ ಪಕ್ಷದ ನಾಯಕ‌ ಎಚ್‌.ಡಿ.ದೇವೇಗೌಡರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಶುಕ್ರವಾರ ನಡೆದ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಗೌಡರನ್ನು ಕಣಕ್ಕಿಳಿಸಲು ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಗಿದೆ. ‘ಸ್ಪರ್ಧೆಗೆ ದೇವೇಗೌಡರು ಇನ್ನೂ ಒಪ್ಪಿಗೆ ಸೂಚಿಸಿಲ್ಲ’ ಎಂದು ಆ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

‘ದೇವೇಗೌಡರನ್ನು ಬೆಂಬಲಿಸುವಂತೆ ಕಾಂಗ್ರೆಸ್‌ಗೆ ಮನವಿ ಮಾಡಿಲ್ಲ. ಗೌಡರು ಸ್ಪರ್ಧಿಸಿದರೆ ಪಕ್ಷಾತೀತವಾಗಿ ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ’ ಎಂದರು.

ಅಭ್ಯರ್ಥಿ ಆಯ್ಕೆಗಾಗಿ ಬಿಜೆಪಿಯ ಪ್ರಮುಖ ನಾಯಕರ ಸಭೆ ಶನಿವಾರ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT