ಶುಕ್ರವಾರ, ಫೆಬ್ರವರಿ 26, 2021
32 °C

ಪತ್ರಕರ್ತ ರಾಮಚಂದ್ರ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹಿರಿಯ ಪತ್ರಕರ್ತ ಸಿ.ಎಂ. ರಾಮಚಂದ್ರ (96) ಜಯನಗರದ ನಿವಾಸದಲ್ಲಿ ಶುಕ್ರವಾರ ಬೆಳಿಗ್ಗೆ ನಿಧನರಾದರು. ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು.

‘ದಿ ಹಿಂದೂ’ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸಿದ್ದ ಅವರು, ಮೌಲಿಕ ಮತ್ತು ವಸ್ತುನಿಷ್ಠ ಬರಹಗಳಿಗೆ ಹೆಸರಾಗಿದ್ದರು. ಅವರು ರಚಿಸಿದ್ದ ‘ಕಾಕ್‌ಪಿಟ್‌ ಆಫ್‌ ಇಂಡಿಯಾ’ಸ್‌ ಪೊಲಿಟಿಕಲ್‌ ಬ್ಯಾಟಲ್ಸ್‌–ಕರ್ನಾಟಕ’ ಎಂಬ ಪುಸ್ತಕ ಕಳೆದ ಮೇನಲ್ಲಿ ಬಿಡುಗಡೆಯಾಗಿತ್ತು. 

ಕರ್ನಾಟಕ ಪತ್ರಿಕಾ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಗೌರವ–ಪುರಸ್ಕಾರಗಳಿಗೆ ಅವರು ಭಾಜನರಾಗಿದ್ದರು.

ಬನಶಂಕರಿಯಲ್ಲಿ ಶುಕ್ರವಾರ ಸಂಜೆ ಅಂತ್ಯಕ್ರಿಯೆ ನೆರವೇರಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು