ರಾಮನಗರಕ್ಕೆ ಅನಿತಾ ಅಭ್ಯರ್ಥಿ: ಜೆಡಿಎಸ್‌ ಪ್ರಕಟ

7

ರಾಮನಗರಕ್ಕೆ ಅನಿತಾ ಅಭ್ಯರ್ಥಿ: ಜೆಡಿಎಸ್‌ ಪ್ರಕಟ

Published:
Updated:

ಬೆಂಗಳೂರು: ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ.

ಅಭ್ಯರ್ಥಿ ಆಯ್ಕೆ ಸಂಬಂಧ ಬುಧವಾರ ರಾತ್ರಿ ಪಕ್ಷದ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಸಭೆ ಕರೆದಿದ್ದರು. ಸಭೆಯಲ್ಲಿ ಅನಿತಾ ಅವರ ಆಯ್ಕೆಯನ್ನು ದೇವೇಗೌಡ ಪ್ರಕಟಿಸಿದರು.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರಾಮನಗರ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಂದ ಗೆಲುವು ಸಾಧಿಸಿದ್ದರು. ಬಳಿಕ ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್‌ ಇಲ್ಲಿ ಜೆಡಿಎಸ್‌ಗೆ ಬೆಂಬಲ ಸೂಚಿಸಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !