ಭಾನುವಾರ, ಮೇ 31, 2020
27 °C

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿಖಿಲ್- ರೇವತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಚಿತ್ರನಟ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಹಾಗೂ ರೇವತಿ ಅವರ ವಿವಾಹವು ಕೇತಗಾನಹಳ್ಳಿಯ ಫಾರ್ಮ್ ಹೌಸ್‌ನಲ್ಲಿ ಶುಕ್ರವಾರ ಬೆಳಗ್ಗೆ ನೆರವೇರಿತು.

ಮನೆಯ ಮುಂಭಾಗ ಮದುವೆಗೆಂದೇ ವಿಶೇಷವಾಗಿ ಮಂಟಪ ನಿರ್ಮಿಸಲಾಗಿತ್ತು.

ಕುಟುಂಬದ ಹಿರಿಯರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಚನ್ನಮ್ಮ ದಂಪತಿ ಧಾರೆ‌ ಕಾರ್ಯ ನಡೆಸಿಕೊಟ್ಟರು.

ಕುಮಾರಸ್ವಾಮಿ-ಅನಿತಾ, ಅವರ ಬೀಗರಾದ ಮಂಜುನಾಥ ದಂಪತಿ ಹಾಗೂ ಎರಡೂ ಕುಟುಂಬದ ಆಪ್ತರಷ್ಟೇ ಪಾಲ್ಗೊಂಡರು. ಒಟ್ಟು 42 ವಾಹನಗಳ ಓಡಾಟಕ್ಕೆ ಪೊಲೀಸರು ಅನುಮತಿ ನೀಡಿದ್ದರು.

ಶಾಸಕ ಎಚ್.ಡಿ. ರೇವಣ್ಣ, ಭವಾನಿ ದಂಪತಿ, ಸಂಸದ ಪ್ರಜ್ವಲ್ ರೇವಣ್ಣ ಸಹ ಪಾಲ್ಗೊಂಡರು.

ನಿಖಿಲ್‌ ಹಾಗೂ ರೇವತಿ ಅವರ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಫೆಬ್ರುವರಿ 10ರಂದು ಅದ್ಧೂರಿಯಾಗಿ ನಡೆದಿತ್ತು. 


ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ದಂಪತಿ ನವ ವಧು–ವರರನ್ನು ಆರ್ಶೀವದಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು