ಗುರುವಾರ , ಸೆಪ್ಟೆಂಬರ್ 23, 2021
22 °C

ಶಾಮನೂರಿಗೆ ಸಚಿವ ಸ್ಥಾನ ನೀಡಲಿ: ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ನಾಯಕರಾದ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕಾಗಿತ್ತು ಎಂದು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ಅಭಿಪ್ರಾಯಪಟ್ಟರು.

ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ಈಗಲೂ ಕಾಲ ಮಿಂಚಿಲ್ಲ. ಪಕ್ಷದ ವರಿಷ್ಠರು ಈ ಬಗ್ಗೆ ಚಿಂತನೆ ನಡೆಸಬೇಕು. ಬಹುಸಂಖ್ಯಾತ ಲಿಂಗಾಯತ ಸಮಾಜಕ್ಕೆ ಇನ್ನಷ್ಟು ರಾಜಕೀಯ ಪ್ರಾತಿನಿಧ್ಯ ನೀಡುವ ಅಗತ್ಯವಿದೆ. ಸಮಾಜವನ್ನು ತುಳಿಯುವ ಪ್ರಯತ್ನವನ್ನು ಯಾವ ಸರ್ಕಾರವೂ ಮಾಡಬಾರದು ಎಂದು ಪ್ರತಿಪಾದಿಸಿದರು.

ವೀರಶೈವ ಲಿಂಗಾಯತ ಧರ್ಮದ ವಿಚಾರದಲ್ಲಿ ಶಾಮನೂರು ಸರಿಯಾದ ನಿಲುವು ತಳೆದಿದ್ದಾರೆ. ಇಡೀ ವೀರಶೈವ ಲಿಂಗಾಯತ ಸಮಾಜ ಅವರನ್ನು ಗೌರವಿಸುತ್ತದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು