ಭಾನುವಾರ, ಏಪ್ರಿಲ್ 5, 2020
19 °C
ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯೆ;

ಕಾಮಾಲೆ ಕಣ್ಣಿಗೆ ಎಲ್ಲವೂ ಹಳದಿ: ಸಿದ್ದರಾಮಯ್ಯಗೆ ರಮೇಶ್‌ ತಿರುಗೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಕಾಮಾಲೆಯಾದವರಿಗೆ ಎಲ್ಲವೂ ಹಳದಿ ಕಾಣುತ್ತದೆ. ಅದಕ್ಕೆ ಏನೂ ಮಾಡಲಾಗದು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ದರಿದ್ರ ಸರ್ಕಾರವೆಂದು ಜರಿದ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಆರ್ಥಿಕ ಮುಗ್ಗಟ್ಟಿನ ಪರಿಸ್ಥಿತಿಯಲ್ಲೂ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಉತ್ತಮ ಬಜೆಟ್‌ ಮಂಡಿಸಿದ್ದಾರೆ. ಕೃಷ್ಣಾ ನೀರಾವರಿ ಯೋಜನೆಗಳಿಗೆ ₹ 7 ಸಾವಿರ ಕೋಟಿ ಕೇಳಿದ್ದೇವು. ₹ 10 ಸಾವಿರ ಕೋಟಿ ನೀಡಿದ್ದಾರೆ. ರೈತರು ಹಾಗೂ ಕಾರ್ಮಿಕರ ಅಭಿವೃದ್ಧಿಗಾಗಿ ಹೆಚ್ಚಿನ ಹಣವನ್ನೂ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿ ಪರವಾದ ಬಜೆಟ್‌ ಮಂಡಿಸಿದ್ದಾರೆ’ ಎಂದು ಪ್ರಶಂಶಿಸಿದರು.

‘ಮಹದಾಯಿ ಪ್ರಕರಣ ನ್ಯಾಯಾಲಯದಲ್ಲಿ ಇದೆ. ಕಾನೂನು ತೊಡಕುಗಳಿವೆ. ಗೋವಾ ಮುಖ್ಯಮಂತ್ರಿ ದೆಹಲಿಯಲ್ಲಿ ಕುಳಿತಿದ್ದಾರೆ. ರಾಜ್ಯದ ಹಿತದೃಷ್ಟಿಯಿಂದ ಏನನ್ನೂ ಕೇಳಬೇಡಿ. ದಯವಿಟ್ಟು ಸಹಕರಿಸಿ’ ಎಂದು ಮಾಧ್ಯಮದವರಲ್ಲಿ ವಿನಂತಿ ಮಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು