ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಟಿ ಕಿರುಕುಳದಿಂದ ರಮೇಶ್ ಆತ್ಮಹತ್ಯೆ: ಸಿದ್ದರಾಮಯ್ಯ

Last Updated 12 ಅಕ್ಟೋಬರ್ 2019, 11:03 IST
ಅಕ್ಷರ ಗಾತ್ರ

ಬೆಂಗಳೂರು: ಐಟಿ ಅಧಿಕಾರಿಗಳ ಕಿರುಕುಳ ತಡೆಯಲಾಗದೆ ಆತ್ಮಹತ್ಯೆ ಮಾಡಿಕೊಳ್ಳುವಬಗ್ಗೆಮಾಧ್ಯಮದವರ ಜತೆ ಮಾಜಿ ಡಿಸಿಎಂ ಪರಮೇಶ್ವರ್ ಪಿಎರಮೇಶ್ ಹೇಳಿಕೊಂಡಿದ್ದಾರೆ‌. ಹೀಗಾಗಿ ಐಟಿ ಕಿರುಕುಳದಿಂದ ರಮೇಶ್ ಸಾವಿಗೀಡಾಗಿದ್ದಾರೆ‌ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಿದ್ದರಾಮಯ್ಯ,ರಾಜಕೀಯ ದ್ವೇಷದಿಂದ ಐಟಿ ರೇಡ್ ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಬಿಜೆಪಿಯಲ್ಲಿ ಶಿಕ್ಷಣ ಸಂಸ್ಥೆ ನಡೆಸುವವರು ಇಲ್ಲವಾ? ಕಾಂಗ್ರೆಸ್ ನಾಯಕರ ಮೇಲೆನೇ ಏಕೆ ಐಟಿ ದಾಳಿ ನಡೆಯುತ್ತದೆ?ಎಲ್ಲರ ಮೇಲೂ ಐಟಿ ದಾಳಿ ನಡೆಯಲಿ.‌ ಅದಕ್ಕೆ ನನ್ನ ಆಕ್ಷೇಪ ಇಲ್ಲ‌. ಆದರೆ ಒಂದು ಪಕ್ಷದ ನಾಯಕರನ್ನು ಗುರಿಯಾಗಿಸಿ ದಾಳಿ ಮಾಡಬಾರದು ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ,ರಮೇಶ್ ಕೆಪಿಸಿಸಿ ಕಚೇರಿಯಲ್ಲಿ ಕೆಲಸ‌ ಮಾಡುತ್ತಿದ್ದರು.ಶುಕ್ರವಾರ ಅವರ ಜತೆ ಮಾತನಾಡಿದ್ದೆ. ಪರಮೇಶ್ವರ್‌ಗೆ ಹುಟ್ಟುಹಬ್ಬಕ್ಕೆ ಶುಭಾಷಯ ಕೋರಲು ಅವರ ಫೋನ್ ಮೂಲಕ ಕರೆ ಮಾಡಿದ್ದೆ. ಈ ಆತ್ಮಹತ್ಯೆಯ ಸುದ್ದಿ ಕೇಳಿ ನೋವಾಗಿದೆ.

ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿದ್ದಾರೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಇದರ ಹಿಂದೆ ಐಟಿ ಅಧಿಕಾರಿಗಳ ಕಿರುಕುಳ ಇದೆ. ಐಟಿ ಅಧಿಕಾರಿಗಳು ಭಯದ ವಾತಾವರಣ ಸೃಷ್ಟಿಸಿದ್ದಾರೆ. ಈ ಹಿಂದೆ ಉದ್ಯಮಿ ಸಿದ್ದಾರ್ಥ್ ಆತ್ಮಹತ್ಯೆ ಮಾಡಿರುವುದು ಎಲ್ಲರಿಗೂ ಗೊತ್ತು. ಅದೇ ರೀತಿ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದರ ತನಿಖೆ ಆಗಬೇಕು. ಈ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ಪೊಲೀಸ್ ಸ್ಪಷ್ಟವಾಗಿ ತನಿಖೆ‌ ಮಾಡಬೇಕು. ಇಡಿ, ಐಟಿ, ಪೊಲೀಸ್ ಇಲಾಖೆ, ಸಿಬಿಐ ಮೇಲೆ ವಿಶ್ವಾಸ ಇಲ್ಲ. ಯಾವ ಕಾರಣಕ್ಕೆ ಆಗಿದೆ ಎಂದು ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ರಮೇಶ್ ಆತ್ಮಹತ್ಯೆ ಅತ್ಯಂತ ನೋವಿನ ಸುದ್ದಿ. ದೇಶದ ಇತಿಹಾಸದಲ್ಲಿ ಈ ರೀತಿಯ ಅಮಾನವೀಯ ಘಟನೆ ನಡೆಯಲು ಸಾಧ್ಯವಿಲ್ಲ

ಐಟಿ ಅಧಿಕಾರಿಗಳು ಕೇಂದ್ರ ಸರ್ಕಾರದ ಅಣತಿಯಂತೆ ರಾಜಕೀಯ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಐಟಿ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿ ಅಧಿಕಾರಿಗಳು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ. ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಕೇಸ್ ದಾಖಲಿಸಿ, ಐಟಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಕಾಂಗ್ರೆಸ್ ಮುಖಂಡವಿ.ಎಸ್.ಉಗ್ರಪ್ಪ ಒತ್ತಾಯ ಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT