ಮಂಗಳವಾರ, ನವೆಂಬರ್ 19, 2019
28 °C

ದುರ್ಬಲ ಅಭ್ಯರ್ಥಿ ಹಾಕಿಸಲು ರಮೇಶ ಯತ್ನ: ಸತೀಶ ಆರೋಪ

Published:
Updated:

ಬೆಳಗಾವಿ: ‘ಗೋಕಾಕ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ದುರ್ಬಲ ಅಭ್ಯರ್ಥಿ ಕಣಕ್ಕಿಳಿಸುವಂತೆ ಅನರ್ಹ ಶಾಸಕ ರಮೇಶ ಜಾರಕಿಹೊಳಿ ದೆಹಲಿ ಮಟ್ಟದಲ್ಲಿ ಪ್ರಯತ್ನಿಸುತ್ತಿದ್ದಾರೆ’ ಎಂದು ಶಾಸಕ ಸತೀಶ ಜಾರಕಿಹೊಳಿ ಆರೋಪಿಸಿದರು.

ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್‍ನ ಕೆಲವು ಮುಖಂಡರ ಮೂಲಕ ಯತ್ನ ನಡೆಸಿದ್ದಾರೆ. ಆದರೆ, ಅವರ ಮಾತನ್ನು ನಮ್ಮ ಪಕ್ಷದವರು ಕೇಳುವುದಿಲ್ಲ. ಲಖನ್‍ ಜಾರಕಿಹೊಳಿಗೇ ಕಾಂಗ್ರೆಸ್ ಟಿಕೆಟ್ ಸಿಗುತ್ತದೆ. ಅವರನ್ನು ಬಿಟ್ಟರೆ ಗೋಕಾಕದಲ್ಲಿ ಏನೂ ಮಾಡಲಾಗುವುದಿಲ್ಲ. ಇನ್ನೆರಡು ದಿನಗಳಲ್ಲಿ ಟಿಕೆಟ್ ಘೋಷಣೆಯಾಗಲಿದೆ’ ಎಂದರು.

‘ಬಿಜೆಪಿ ಅಶೋಕ ಪೂಜಾರಿ ಅವರನ್ನು ಕಾಂಗ್ರೆಸ್‍ಗೆ ಕರೆತರುವ ಕುರಿತು ಚರ್ಚೆ ಆಗಿದೆ. ಹಿಂದಿನ ಚುನಾವಣೆಯಲ್ಲಿ ಅವರು ಗಳಿಸಿದ ಮತಗಳ ಮೇಲೆ ಚರ್ಚೆಯಾಗಿದೆ. ಆದರೆ, ಈ ಚುನಾವಣೆಯಲ್ಲಿ ಹಿಂದಿನ ಲೆಕ್ಕ ತೆಗೆದುಕೊಳ್ಳಲು ಆಗುವುದಿಲ್ಲ. ಅವರನ್ನು ಕಾಂಗ್ರೆಸ್‍ಗೆ ಕರೆತರುವುದು ಪಕ್ಷದ ಮಟ್ಟದಲ್ಲಿ ನಡೆಯುತ್ತಿಲ್ಲ. ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿದೆ’ ಎಂದು ಪ್ರತಿಕ್ರಿಯಿಸಿದರು.

ಪ್ರತಿಕ್ರಿಯಿಸಿ (+)