ಮಂಗಳವಾರ, ಸೆಪ್ಟೆಂಬರ್ 17, 2019
25 °C

‘ರಂಜಾನ್ ಉಪವಾಸ ವ್ರತ ನಾಳೆಯಿಂದ’

Published:
Updated:

ಬೆಂಗಳೂರು: ‘ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ (ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ) ಮಂಗಳವಾರದಿಂದ ರಂಜಾನ್ ಮಾಸದ ಉಪವಾಸ ವ್ರತ ಆಚರಿಸಲಾಗುವುದು‘ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ ಕಚೇರಿಯಲ್ಲಿ ಭಾನುವಾರ ಜರುಗಿದ ‘ರಾಜ್ಯ ಚಂದ್ರ ದರ್ಶನ’ ಸಮಿತಿಯ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 

ಸಭೆಯಲ್ಲಿ ಧಾರ್ಮಿಕ ಮುಖಂಡರು, ಚಂದ್ರ ದರ್ಶನ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.

Post Comments (+)