ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ.27ರಿಂದ ರಾಷ್ಟ್ರೀಯ ರಂಗ ಉತ್ಸವ

Last Updated 22 ನವೆಂಬರ್ 2018, 20:00 IST
ಅಕ್ಷರ ಗಾತ್ರ

ಶಿವಮೊಗ್ಗ: ಕರ್ನಾಟಕ ನಾಟಕ ಅಕಾಡೆಮಿ ತಂಜಾವೂರಿನ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರದ ಸಹಯೋಗದಲ್ಲಿ ಐದು ದಿನಗಳ ರಾಷ್ಟ್ರೀಯ ರಂಗ ಉತ್ಸವವನ್ನು ನ.27ರಿಂದ ಆಯೋಜಿಸಿದೆ.

ಕುವೆಂಪು ರಂಗಮಂದಿರದಲ್ಲಿ ನಡೆಯುವ ಉತ್ಸವವನ್ನು ಹಿರಿಯ ರಂಗಕರ್ಮಿ ಕೆ.ವಿ.ಅಕ್ಷರ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಕೆ.ಎ.ದಯಾನಂದ ಹಾಗೂ ತಂಜಾವೂರಿನ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರದ ಸದಸ್ಯ ತೊಟ್ಟವಾಡಿ ನಂಜುಂಡಸ್ವಾಮಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ನಾಟಕ ಅಕಾಡೆಮಿಯ ಅಧ್ಯಕ್ಷ ಜೆ. ಲೋಕೇಶ್‌ ಗುರುವಾರ ಪತ್ರಿಕಾಗೋಷ್ಠಿಯಲ್ಲಿಮಾಹಿತಿ ನೀಡಿದರು.

ಕನ್ನಡ ಸೇರಿ ದಕ್ಷಿಣ ಭಾರತದ ವಿವಿಧ ಭಾಷೆಗಳಾದ ತಮಿಳು, ಮರಾಠಿ, ಮಲಯಾಳಂ, ತುಳು, ಕೊಂಕಣಿ ಭಾಷೆಗಳ ನಾಟಕಗಳು ಪ್ರದರ್ಶನಗೊಳ್ಳುತ್ತಿವೆ. ಪ್ರತಿದಿನ ಸಂಜೆ 5.15ರಿಂದ 6.15ರವೆಗೆ ರಂಗಪ್ರತಿನಿಧಿಗಳ ಸಂವಾದ, 6.15ರಿಂದ 6.45ರವರೆಗೆ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿವೆ. ಸಂಜೆ 7ಕ್ಕೆ ನಾಟಕ ಪ್ರದರ್ಶನಗೊಳ್ಳಲಿದೆ ಎಂದುವಿವರ ನೀಡಿದರು.

ಸಂಜೆ 6.15ಕ್ಕೆ ಕ್ರಮವಾಗಿ ಚಿತ್ತರಿಗಿ ಗಂಗಾಧರ ಶಾಸ್ತ್ರಿ, ಶ್ರೀಮತಿ ರೆಹಮಾನವ್ವ ಕಲ್ಮನಿ, ಟಿ.ಕರಿಬಸವಯ್ಯ, ಜಿ.ಎಸ್.ನಾರಾಯಣರಾವ್, ಬಿ.ಚಂದ್ರಶೇಖರ್ ಅವರ ಬದುಕು ಹಾಗೂ ಸಾಧನೆಯನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಕುರಿತ ಸಾಕ್ಷ್ಯಚಿತ್ರಗಳು ಪ್ರದರ್ಶನಗೊಳ್ಳಲಿವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಾಸ್ವೆಹಳ್ಳಿ ಸತೀಶ್, ಪ್ರತಿಭಾ, ಹಾಲಸ್ವಾಮಿಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT