ಸುಟ್ಟ ಸ್ಥಿತಿಯಲ್ಲಿ ಯುವತಿ ಶವ ಪತ್ತೆ: ಅತ್ಯಾಚಾರ ನಡೆಸಿ ಕೊಲೆ ಶಂಕೆ

7

ಸುಟ್ಟ ಸ್ಥಿತಿಯಲ್ಲಿ ಯುವತಿ ಶವ ಪತ್ತೆ: ಅತ್ಯಾಚಾರ ನಡೆಸಿ ಕೊಲೆ ಶಂಕೆ

Published:
Updated:

ಚಳ್ಳಕೆರೆ: ತಾಲ್ಲೂಕಿನ ಕಾಪರಹಳ್ಳಿ ಹೊರವಲಯದ ಜಮೀನಿನಲ್ಲಿ ಅರೆಬೆಂದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕೊಲೆಯಾಗಿರುವ ಯುವತಿ ಸುಮಾರು 24 ವರ್ಷದವರಾಗಿದ್ದು, ಮುಖವನ್ನು ಮಾತ್ರ ಸುಟ್ಟು ಹಾಕಲಾಗಿದೆ. ಇದರಿಂದ ಗುರುತು ಪತ್ತೆಯಾಗಿಲ್ಲ.

ಕಾಪರಹಳ್ಳಿಯ ಜಮೀನಿನಲ್ಲಿ ಭಾನುವಾರ ಯುವತಿಯ ಶವ ಕಂಡ ಕುರಿಗಾಹಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಿದರು. ಸ್ಥಳದಲ್ಲಿ ಕೆಲ ಮಾತ್ರೆಗಳು ಲಭ್ಯವಾಗಿದ್ದು, ವಾಹನವೊಂದು ಸಂಚರಿಸಿದ ಕುರುಹು ಉಳಿದಿದೆ.ಯುವತಿಯನ್ನು ಅಪಹರಿಸಿ ಕೊಲೆ ಮಾಡಿ ವಾಹನದಲ್ಲಿ ತಂದು ಬಿಸಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಹೀಗಾಗಿ, ಚಳ್ಳಕೆರೆಗೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ–4ರ ಟೋಲ್‌ಗೇಟ್‌ನಲ್ಲಿಯೂ ವಾಹನಗಳ ತಪಾಸಣೆ ನಡೆಸಲಾಗಿದೆ.

‘ಮೇಲ್ನೋಟಕ್ಕೆ ಇದೊಂದು ಕೊಲೆ ಎಂಬುದು ಖಚಿತವಾಗಿದೆ. ಯುವತಿಯ ಮುಖ ಸುಟ್ಟುಹಾಕಿದ್ದರಿಂದ ಗುರುತು ಪತ್ತೆಯಾಗಿಲ್ಲ. ಮರಣೋತ್ತರ ಪರೀಕ್ಷೆಯ ಬಳಿಕ ಸತ್ಯಾಂಶ ತಿಳಿಯಲಿದ್ದು, ತನಿಖೆಯನ್ನು ಚುರುಕುಗೊಳಿಸಲಾಗಿದೆ’ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಮ್‌ ಲಕ್ಷ್ಮಣ್‌ ಅರಸಿದ್ದಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !