ಗುರುವಾರ , ಏಪ್ರಿಲ್ 2, 2020
19 °C
ಅರಣ್ಯ ಖಾತೆ ಸಚಿವ ಆನಂದ್‌ ಸಿಂಗ್‌ ದೊಡ್ಡಪ್ಪನ ಮಗ

ಹೃದಯಾಘಾತಕ್ಕೆ ಮಾಜಿ ಶಾಸಕ ರತನ್‌ ಸಿಂಗ್‌ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಅರಣ್ಯ ಸಚಿವ ಆನಂದ್‌ ಸಿಂಗ್‌ ಅವರ ದೊಡ್ಡಪ್ಪನ ಮಗ, ಮಾಜಿ ಶಾಸಕ ರತನ್‌ ಸಿಂಗ್‌ (61) ಮಂಗಳವಾರ ಸಂಜೆ ಇಲ್ಲಿ ಹೃದಯಾಘಾತದಿಂದ ನಿಧನರಾದರು.

ಅವರಿಗೆ ಪತ್ನಿ, ಮಗಳಿದ್ದಾಳೆ. ಮನೆಯಲ್ಲಿದ್ದಾಗಲೇ ಹೃದಯಾಘಾತವಾಗಿ ಅಲ್ಲೇ ಕೊನೆಯುಸಿರೆಳೆದಿದ್ದಾರೆ. ಬುಧವಾರ (ಮಾ.25) ನಗರದ ರಾಣಿಪೇಟೆಯಲ್ಲಿ ರಜಪೂತ ಸಮಾಜದ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

1991ರ ವಿಜಯನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆದ್ದು ಶಾಸಕರಾಗಿದ್ದರು. ಅದಕ್ಕೂ ಮುನ್ನ ನಗರಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿದ್ದರು. ಇವರ ತಂದೆ ಸತ್ಯನಾರಾಯಣ ಸಿಂಗ್‌ ವಿಜಯನಗರ ಕ್ಷೇತ್ರದಿಂದಲೇ ಎರಡು ಸಲ ಶಾಸಕರಾಗಿ ಆಯ್ಕೆಯಾಗಿದ್ದರು.

ಸಚಿವ ಆನಂದ್‌ ಸಿಂಗ್‌ ಅವರ ಅನುಪಸ್ಥಿತಿಯಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಗಳಿಗೆ ಅವರೇ ಹಾಜರಾಗುತ್ತಿದ್ದರು. ಮೃದು. ಮಿತ ಭಾಷಿ ರತನ್‌ ಸಿಂಗ್‌, ಎಲ್ಲ ಸಮಾಜದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)