ಗುರುವಾರ , ಜೂನ್ 24, 2021
22 °C

ಜೂನ್‌, ಜುಲೈ ತಿಂಗಳ ಪಡಿತರ ವಿತರಣೆಗೂ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌–19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಡು ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಈಗಾಗಲೇ ಮೂರು ತಿಂಗಳ ಪಡಿತರ ವಿತರಿಸಿರುವ ರಾಜ್ಯ ಸರ್ಕಾರ ಮುಂದಿನ ಎರಡು ತಿಂಗಳ ಅವಧಿಗೆ ಪಡಿತರ ವಿತರಿಸಲು ಸರ್ಕಾರ ಸಿದ್ಧತೆ ನಡೆಸಿದೆ.

ಮೇ ಮೊದಲ ವಾರದಲ್ಲಿ ಜೂನ್‌ ಮತ್ತು ಜುಲೈ ತಿಂಗಳ ಪಡಿತರ ವಿತರಣೆಯ ಅಧಿಕೃತ ಅದೇಶ ಹೊರಬೀಳಲಿದೆ ಎಂದು
ಸರ್ಕಾರದ ಮೂಲಗಳು ‘ಪ್ರಜಾವಾಣಿ’ಗೆ ಖಚಿತ ಪಡಿಸಿವೆ.

ಲಾಕ್‌ಡೌನ್‌ ಬಳಿಕ ಮೂರು ತಿಂಗಳ ಪಡಿತರವನ್ನು ಬಿಪಿಎಲ್‌ ಮತ್ತು ಎಪಿಎಲ್‌ ಕಾರ್ಡ್‌ದಾರರ ಪೈಕಿ ಶೇ 94 ರಷ್ಟು ಜನರಿಗೆ ವಿತರಿಸಲಾಗಿದೆ. ಬಿಪಿಎಲ್‌ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದವರಿಗೂ ಮೂರು ತಿಂಗಳ ಅವಧಿಗೆ ತಿಂಗಳಿಗೆ ತಲಾ 10 ಕೆ.ಜಿ ಅಕ್ಕಿ, 1 ಕೆ.ಜಿ ತೊಗರಿ ಬೇಳೆ ವಿತರಿಸಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು