ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಡಿತರ ಚೀಟಿದಾರರಿಗೆ 8.51 ಲಕ್ಷ ಟನ್ ಆಹಾರ ಧಾನ್ಯ ಪೂರೈಕೆ

Last Updated 9 ಮೇ 2020, 2:28 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ 4.01 ಕೋಟಿ ಪಡಿತರ ಚೀಟಿದಾರರಿಗೆ ಮೂರು ತಿಂಗಳ ಮಟ್ಟಿಗೆ ಪಡಿತರ ವಿತರಣೆಗಾಗಿ ಕೇಂದ್ರ ಸರ್ಕಾರ 8.51 ಮೆಟ್ರಿಕ್‌ ಲಕ್ಷ ಟನ್‌ ಉಚಿತ ಆಹಾರ ಧಾನ್ಯಗಳನ್ನು ಪೂರೈಸಿದೆ.

‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ ಪ್ರತಿ ತಿಂಗಳಿಗೆ 2.1 ಲಕ್ಷ ಟನ್ ಆಹಾರ ಧಾನ್ಯಗಳನ್ನು ನಿಗದಿಪಡಿಸಲಾಗಿದೆ. ಲಾಕ್‌ಡೌನ್‌ ಆದಾಗಿನಿಂದ ರಾಜ್ಯಕ್ಕೆ 302 ರೈಲು ಲೋಡ್ (8.03 ಲಕ್ಷ ಟನ್) ಆಹಾರ ಧಾನ್ಯಗಳನ್ನು ಕಳುಹಿಸಲಾಗಿದೆ’ ಎಂದು ಭಾರತ ಆಹಾರ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಿ.ವಿ.ಪ್ರಸಾದ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ₹ 2,351 ಕೋಟಿ ವೆಚ್ಚ ಭರಿಸುತ್ತಿದೆ. ರಾಜ್ಯ ಇದುವರೆಗೆ ₹1,735 ಕೋಟಿ ಮೌಲ್ಯದ 4.45 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯಗಳನ್ನು ಬಳಸಿಕೊಂಡಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT