ಸೋಮವಾರ, ಏಪ್ರಿಲ್ 6, 2020
19 °C

ರವಿ ಪೂಜಾರಿ ಬೆಂಗಳೂರು ಪೊಲೀಸರ ವಶಕ್ಕೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸೆನೆಗಲ್‌ನಲ್ಲಿ ಬಂಧಿಸಲಾದ ಗ್ಯಾಂಗ್‌ಸ್ಟರ್ ರವಿ ಪೂಜಾರಿಯನ್ನು ಭಾನುವಾರ ರಾತ್ರಿಯೇ ಬೆಂಗಳೂರಿಗೆ ಕರೆತಂದಿರುವ ಪೊಲೀಸರು, ತಿಲಕ್ ನಗರ ಕೊಲೆ ಪ್ರಕರಣದಲ್ಲಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ವಿಚಾರಣೆ ನಡೆಸಿದ ನ್ಯಾಯಾಧೀಶರು ಆತನನ್ನು ಮಾರ್ಚ್ 7ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ

ಜನವರಿಯಲ್ಲಿ ಬಂಧಿಸಲಾಗಿದ್ದ ರವಿ ಪೂಜಾರಿ ಸೆನೆಗಲ್ ಪೊಲೀಸರ ಕಸ್ಟಡಿಯಲ್ಲಿದ್ದ. ಭಾರತಕ್ಕೆ ಕಳುಹಿಸಬೇಡಿ ಎಂದು ಅಲ್ಲಿಯ ಸುಪ್ರಿಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಆ ಅರ್ಜಿಯನ್ನು 2020ರ ಫೆಬ್ರುವರಿ 19ರಂದು ನ್ಯಾಯಾಲಯ ತಿರಸ್ಕರಿಸಿತ್ತು‌.

 ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿ ರಾಜ್ಯಕ್ಕೆ ಕರೆತಂದಿದ್ದಾರೆ ಎಂದು ಎಡಿಜಿಪಿ ಅಮರ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು