ಭಾನುವಾರ, ಏಪ್ರಿಲ್ 11, 2021
26 °C

ಅಂಕಪಟ್ಟಿ ನೈಜತೆ ಪರಿಶೀಲನೆಗೆ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಸರ್ಕಾರದ ಹುದ್ದೆಗಳಿಗೆ ನೇಮಕಗೊಳ್ಳುವ ಅಭ್ಯರ್ಥಿಗಳು ಸಲ್ಲಿಸುವ ಅಂಕಪಟ್ಟಿಗಳು, ಶೈಕ್ಷಣಿಕ ಪ್ರಮಾಣ ಪತ್ರಗಳ ನೈಜತೆ ಬಗ್ಗೆ ಅವುಗಳನ್ನು ವಿತರಿಸಿರುವ ವಿಶ್ವವಿದ್ಯಾಲಯಗಳು/ಶೈಕ್ಷಣಿಕ ಪರೀಕ್ಷಾ ಮಂಡಳಿಗಳಿಂದ ಪರಿಶೀಲಿಸಿ ಖಚಿತಪಡಿಸಿಕೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಅಂಕಪಟ್ಟಿ ಮತ್ತು ಶೈಕ್ಷಣಿಕ ಪ್ರಮಾಣ ಪತ್ರಗಳು ಅಸಲಿ ಎಂದು ವಿಶ್ವವಿದ್ಯಾಲಯಗಳು ಮತ್ತು ಶೈಕ್ಷಣಿಕ ಪರೀಕ್ಷಾ ಮಂಡಳಿಗಳು ಖಚಿತಪಡಿಸಿದ ಬಳಿಕ ನೇಮಕಾತಿ ಆದೇಶ ನೀಡುವಂತೆ ಸೂಚಿಸಲಾಗಿದೆ.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳ ಆಡಳಿತ ವ್ಯಾಪ್ತಿಗೊಳಪಡುವ ಸರ್ಕಾರದ ಇಲಾಖೆಗಳು ಹಾಗೂ ಸರ್ಕಾರದ ಅನುದಾನ ಪಡೆಯುವ ಸಂಸ್ಥೆಗಳಿಗೆ ಈ ಆದೇಶ ಅನ್ವಯವಾಗಲಿದೆ.

ನಕಲಿ ಅಂಕಪಟ್ಟಿಗಳನ್ನು ಕೊಟ್ಟು ಸರ್ಕಾರಿ ನೌಕರಿ ಪಡೆಯುವ ಪ್ರಕರಣಗಳು ಹೆಚ್ಚಿರುವುದರಿಂದ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು