ಶನಿವಾರ, ಅಕ್ಟೋಬರ್ 19, 2019
22 °C
ತಡೆಯಾಜ್ಞೆಗೆ ಮೊರೆ

ಉಪಚುನಾವಣೆ ಸ್ಪರ್ಧೆಗೆ ಅವಕಾಶ ಕೋರಲಿರುವ ಅನರ್ಹರು

Published:
Updated:

ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ನಡೆಯುವ ವಿಚಾರಣೆಯ ವೇಳೆ ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ನೀಡುವಂತೆ ಅನರ್ಹ ಶಾಸಕರು ಮನವಿ ಸಲ್ಲಿಸಲಿದ್ದಾರೆ.

ಸ್ಪೀಕರ್‌ ನೀಡಿರುವ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ 17 ಶಾಸಕರು ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ಪೀಠದಲ್ಲಿ ಬೆಳಿಗ್ಗೆ 11ಕ್ಕೆ ನಡೆಯಲಿದೆ.

ಪ್ರಕರಣ ಇತ್ಯರ್ಥಗೊಳ್ಳದೇ ಇರುವುದರಿಂದ ಸ್ಪರ್ಧೆಗೆ ಅವಕಾಶ ನೀಡಬೇಕು. ಇಲ್ಲದಿದ್ದರೆ, ಆದೇಶ ಹೊರಬೀಳುವವರೆಗೆ ಚುನಾವಣೆ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಮೌಖಿಕವಾಗಿ ಕೋರಲಾಗುವುದು ಎಂದು ಅನರ್ಹರ ಪರ ವಕೀಲರು ತಿಳಿಸಿದರು.

ತಮಿಳುನಾಡಿನಲ್ಲಿ ಅನರ್ಹ ಶಾಸಕರ ಸ್ಪರ್ಧೆಗೆ ಇತ್ತೀಚೆಗಷ್ಟೇ ಅವಕಾಶ ನೀಡಲಾಗಿದೆ. ಅದೇ ಮಾದರಿಯಲ್ಲಿ ಅವಕಾಶ ನೀಡುವಂತೆ ಕೋರಲು ನಿರ್ಧರಿಸಲಾಗಿದೆ. ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಡಾ.ಅಶ್ವತ್ಥನಾರಾಯಣ ಅವರು ಅನರ್ಹ ಶಾಸಕರ ಪರ ವಾದ ಮಂಡಿಸಲಿರುವ ಹಿರಿಯ ವಕೀಲ ಮುಕುಲ್‌ ರೋಹಟಗಿ ಅವರನ್ನು ಭಾನುವಾರ ಭೇಟಿ ಮಾಡಿ ಚರ್ಚೆ ನಡೆಸಿದರು.

Post Comments (+)