ಮಂಗಳವಾರ, ಮಾರ್ಚ್ 9, 2021
31 °C
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿಕೆ

ಉದ್ಯೋಗಖಾತ್ರಿ ಅನುಷ್ಠಾನ ಅಕ್ರಮ: 12 ಅಧ್ಯಕ್ಷರು,30 ಪಿಡಿಒ ಅನರ್ಹತೆಗೆ ಶಿಫಾರಸ್ಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬಳ್ಳಾರಿ: ‘ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ನಿಯಮ ಉಲ್ಲಂಘಿಸಿರುವ ಜಿಲ್ಲೆಯ 12 ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು 30 ಅಭಿವೃದ್ಧಿ ಅಧಿಕಾರಿಗಳ ಅನರ್ಹತೆಗೆ ಶಿಫಾರಸ್ಸು ಮಾಡಲಾಗಿದೆ’ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.

ಖಾತ್ರಿ ಯೋಜನೆ ಅಡಿ ಆಸ್ತಿ ಸೃಜನೆ ಕಾಮಗಾರಿಗಳ ಅನುಷ್ಠಾನದಲ್ಲಿ ಜನಪ್ರತಿನಿಧಿಗಳ ಪಾಲ್ಗೊಳ್ಳುವಿಕೆ ಕುರಿತು ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ‘ಕೆಲವರು ಉದ್ಯೋಗ ಖಾತ್ರಿ ಚೀಟಿಯಿಲ್ಲದೆ ಕಾಮಗಾರಿ ನಡೆಸಿದ್ದಾರೆ. ಇನ್ನೂ ಕೆಲವರು ಅನವಶ್ಯಕವಾಗಿ ಯಂತ್ರಗಳನ್ನು ಬಳಸಿದ್ದಾರೆ. ಈ ಅಕ್ರಮಗಳು ಸಾಬೀತಾಗಿದ್ದರಿಂದ ಅವರನ್ನು ಅನರ್ಹಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ ಶಿಫಾರಸು ಮಾಡಲಾಗಿದೆ’ ಎಂದರು.

‘ಖಾತ್ರಿ ಯೋಜನೆ ಅಡಿ ಜಿಲ್ಲೆಯು ಮಾನವ ದಿನಗಳ ಸೃಜನೆಯಲ್ಲಿ ಮುಂದಿದೆ. ಆದರೆ ಸಾಮಗ್ರಿ ವೆಚ್ಚ ವಿತರಣೆಯಲ್ಲಿ ಹಿಂದೆ ಬಿದ್ದಿದೆ. ಕೆಲಸ ಕಡಿಮೆಯಾದರೂ ಪರವಾಗಿಲ್ಲ. ನಿಯಮಬಾಹಿರವಾಗಿ ಮಾಡುವುದು ಬೇಡ. ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು