ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಹೋರಾಟಗಾರರನ್ನು ಬಿಡುಗಡೆ ಮಾಡಿ: ಎಚ್‌ಡಿಕೆ ಆಗ್ರಹ

Last Updated 19 ಆಗಸ್ಟ್ 2019, 8:52 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನಲ್ಲಿ ಕಟ್ಟಡವೊಂದರ ಮೇಲಿದ್ದ ಹಿಂದಿ ನಾಮಫಲಕ ತೆರವು ಮಾಡಿದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸೋಮವಾರಟ್ವೀಟ್‌ ಮಾಡಿರುವ ಎಚ್‌.ಡಿ ಕುಮಾರಸ್ವಾಮಿ, ‘ಮಾನ್ಯ ಮುಖ್ಯಮಂತ್ರಿಗಳೇ ಕನ್ನಡ ಪರ ಹೋರಾಟಗಾರರ ‌ಮೇಲೆ ದಾಖಲಿಸಿರುವ ಮೊಕದ್ದಮೆಯನ್ನು ಹಿಂಪಡೆಯಿರಿ. ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯದ ಪಾಲಿನ ನೆರವಿನ ಹಣವನ್ನು ಪಡೆದುಕೊಂಡು ಬರುವುದರಲ್ಲಿ ನಿಮ್ಮ ಪೌರುಷವನ್ನು ತೋರಿಸಿ,’ ಎಂದು ಅವರು ಹೇಳಿದ್ದಾರೆ.

ಇನ್ಫೆಂಟ್ರಿ ರಸ್ತೆಯಲ್ಲಿರುವ ಜೈನ ಸಮುದಾಯಕ್ಕೆ ಸೇರಿದ‘ಗಣೇಶ್ ಬಾಗ್‌’ ಎಂಬ ಕಟ್ಟದ ಬಳಿಗೆ ಇದೇ 16ರಂದು ತೆರಳಿದ್ದ ಕನ್ನಡ ಪರ ಹೋರಾಟಗಾರರು ‘ಹಿಂದಿ’ ಭಾಷೆಯಲ್ಲಿ ಕಟೌಟ್‌ ಹಾಕಿದ್ದನ್ನು ಪ್ರಶ್ನಿಸಿದ್ದರು. ತಾವೇ ಕಾಂಪೌಂಡ್ ಏರಿ, ಕಟೌಟ್‌ ಕಿತ್ತು ಎಸೆದಿದ್ದರು’ ಈ ಹಿನ್ನೆಲೆಯಲ್ಲಿ ‘ಕರ್ನಾಟಕ ರಕ್ಷಣಾ ಸೇನೆ’ ಸಂಘಟನೆಯ ಆರು ಕಾರ್ಯಕರ್ತರನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆಯ ಪೊಲೀಸರು ಬಂಧಿಸಲಾಗಿದೆ.

ಸದ್ಯ ಈ ವಿಷಯ ಧರ್ಮ, ರಾಜಕೀಯಗಳ ಆಯಾಮ ಪಡೆದುಕೊಂಡಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT