ಶುಕ್ರವಾರ, ಮಾರ್ಚ್ 5, 2021
21 °C

ಬಿಟ್ಟುಹೋದ ವರ್ಗಗಳಿಗೆ ಶೀಘ್ರ ಪರಿಹಾರ ಘೋಷಣೆ: ಮುಖ್ಯಮಂತ್ರಿ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಈಗಾಗಲೇ ಆರ್ಥಿಕ ಪ್ಯಾಕೇಜ್‌ ಘೋಷಣೆ ಮಾಡಿದ ಪಟ್ಟಿಯಲ್ಲಿ ಇಲ್ಲದ ಸಣ್ಣಪುಟ್ಟ ವರ್ಗಗಳಿಗೆ ಒಂದೆರಡು ದಿನಗಳಲ್ಲಿ ನೆರವು ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮತ್ತು ಜಿಲ್ಲಾ ಘಟಕಗಳ ಅಧ್ಯಕ್ಷರ ಜೊತೆ ಭಾನುವಾರ ವೀಡಿಯೊ ಸಂವಾದ ನಡೆಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಈ ಭರವಸೆ ನೀಡಿದರು.

ಸಂಕಷ್ಟದಲ್ಲಿರುವ ಸಮುದಾಯಗಳಿಗೆ ವಿಶೇಷ ನೆರವು ಘೋಷಿಸಿದ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿದ ಬಿಜೆಪಿ ಮುಖಂಡರು, ಬಿಟ್ಟು ಹೋಗಿರುವ ಕೆಲವು ವರ್ಗಗಳಿಗೂ ಆದಷ್ಟು ಬೇಗ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ಹೊರರಾಜ್ಯಗಳಿಂದ ಬರುವವರಿಗೆ ಕ್ವಾರಂಟೈನ್‌ ಕಡ್ಡಾಯ: ಸಿಎಂ ಬಿ.ಎಸ್. ಯಡಿಯೂರಪ್ಪ

‘ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಮನೆ ಮನೆಗಳಿಗೆ ತಲುಪುವಂತೆ ಮಾಡುವ ಜವಬ್ದಾರಿ ನಿಮ್ಮ‌ ಮೇಲಿದೆ. ನಿಮ್ಮ ಅಭಿಪ್ರಾಯಗಳನ್ನು ಆದ್ಯತೆ ಮೇರೆಗೆ ಪರಿಗಣಿಸುತ್ತೇನೆ. ಜಿಲ್ಲಾವಾರು ಕೋವಿಡ್ ನಿಯಂತ್ರಣದಲ್ಲಿ ತೊಂದರೆಗಳಾದರೆ ತಕ್ಷಣ ತಿಳಿಸಿ’ ಎಂದು ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು