ಗುರುವಾರ , ಆಗಸ್ಟ್ 5, 2021
26 °C

ಆಟೋ, ಟ್ಯಾಕ್ಸಿ ಚಾಲಕರಿಗೆ ಪರಿಹಾರ: ₹40 ಕೋಟಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಕೋವಿಡ್‌–19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಪರಿಹಾರ ಧನ ನೀಡಲು ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ₹40 ಕೋಟಿ ಬಿಡುಗಡೆ ಮಾಡಿದೆ.

ಇದಕ್ಕಾಗಿ ಲೆಕ್ಕ ಶೀರ್ಷಿಕೆ ಇತರೆ ಖರ್ಚುಗಳಿಂದ ₹30.34 ಕೋಟಿ, ಪರಿಶಿಷ್ಟ ಜಾತಿ ಉಪ ಯೋಜನೆ ₹6.78 ಕೋಟಿ ಮತ್ತು ಗಿರಿಜನ ಉಪಯೋಜನೆಯಿಂದ ₹2.88 ಕೋಟಿ ಇದಕ್ಕಾಗಿ ಬಳಸಲಾಗಿದೆ. 

ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ ತಲಾ ₹5,000 ನೀಡಲಾಗುವುದು. ಒಂದು ವೇಳೆ ಹೆಚ್ಚುವರಿ ಅನುದಾನದ ಅಗತ್ಯವಿದ್ದರೆ, ಸಾದಿಲ್ವಾರು ನಿಧಿಯಿಂದ ಅಥವಾ ಪೂರಕ ಅಂದಾಜು–1 ರ ಮೂಲಕ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು