ಭಾನುವಾರ, ಜನವರಿ 26, 2020
21 °C

ರಾಮನಗರ ಜಿಲ್ಲೆಯ ಹೆಸರು ಬದಲಾಯಿಸುವುದು ರಾಮನಿಗೆ ಮಾಡುವ ಅಪಮಾನ: ಕುಮಾರಸ್ವಾಮಿ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

HD Kumaraswamy

ಬೆಂಗಳೂರು: ರಾಮನಗರ ಜಿಲ್ಲೆಯ ಎಂಬ ಹೆಸರನ್ನು ನವ ಬೆಂಗಳೂರು ಎಂದು ಬದಲಿಸುವುದು ರಾಮನಿಗೆ ಮಾಡುವ ಅನ್ಯಾಯ ಎಂದು  ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

 ರಾಜ್ಯ ಸರ್ಕಾರ  ರಾಮನಗರದ ಹೆಸರು ಬದಲಿಸಿದರೆ, ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದಿದ್ದಾರೆ ಕುಮಾರಸ್ವಾಮಿ.

ರಾಮನಗರ ಜಿಲ್ಲೆಯ ಹೆಸರು ಬದಲಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಸರಣಿ ಟ್ವೀಟ್ ಮಾಡಿದ ಕುಮಾರಸ್ವಾಮಿ, ಬಿಎಸ್‌ವೈ ಅವರೇ, ರಾಮನಗರದ ಅಭಿವೃದ್ಧಿ ಮಾಡುವ ಇಚ್ಛೆ ನಿಮಗಿದ್ದರೆ, ಜಿಲ್ಲೆಗೆ ನಾನು ನನ್ನ ಬಜೆಟ್‌ನಲ್ಲಿ ಮೀಸಲಿಟ್ಟ ಹಣವನ್ನು ಪ್ರಾಮಾಣಿಕವಾಗಿ ಬಿಡುಗಡೆ ಮಾಡಿ ಸಾಕು. ಅದನ್ನೂ ಮೀರಿದ ಅಭಿವೃದ್ಧಿ ಮಾಡುವ ಮನಸ್ಸಿದ್ದರೆ ನಿಮಗೆ ನನ್ನ, ನನ್ನ ಜನರ ಸಹಕಾರ ಸದಾ ಇರಲಿದೆ. ಆದರೆ ಹೆಸರು ಬದಲಿಸಿ ಜಿಲ್ಲೆ ಸಂಸ್ಕೃತಿ, ಅಸ್ಮಿತೆಗೆ ಬೆಂಕಿ ಇಡಬೇಡಿ ಎಂದಿದ್ದಾರೆ. 

ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ‌. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ ಎಂದು #SaveRamanagara ಹ್ಯಾಷ್‌ಟ್ಯಾಗ್ ಬಳಸಿ ಎಚ್‌ಡಿಕೆ 10 ಟ್ವೀಟ್‌ಗಳನ್ನು  ಮಾಡಿದ್ದಾರೆ.

ಇದನ್ನೂ ಓದಿ: ರಾಮನಗರ ಬದಲಿಗೆ ‘ನವ ಬೆಂಗಳೂರು’ಹೆಸರು ಮತ್ತೆ ಮುನ್ನೆಲೆಗೆ: ವ್ಯಾಪಕ ಚರ್ಚೆ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು