ಸೋಮವಾರ, ಜೂನ್ 1, 2020
27 °C

ಮದ್ಯ ಮಾರಾಟಕ್ಕೆ ಅವಕಾಶ ನೀಡುವಂತೆ ಜನಪ್ರತಿನಿಧಿಗಳಿಂದಲೂ ಮನವಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಲಾಕ್‌ಡೌನ್‌ ಸಂದರ್ಭದಲ್ಲಿ, ದಿನಸಿ ಖರೀದಿಗೆ ಸಮಯ ನಿಗದಿ ಮಾಡಿದಂತೆಯೇ ಎಂ.ಆರ್‌.ಪಿ ಔಟ್‌ಲೆಟ್‌ಗಳನ್ನು ತೆರೆದು ಮದ್ಯವನ್ನು ಮನೆಗೆ ಕೊಂಡೊಯ್ಯಲು ಅವಕಾಶ ನೀಡಬೇಕು ಎಂಬ ಮದ್ಯಪ್ರಿಯರ ಬೇಡಿಕೆಗೆ ಜಿಲ್ಲೆಯ ಇಬ್ಬರು ಜನಪ್ರತಿನಿಧಿಗಳೂ ಧ್ವನಿಗೂಡಿಸಿದ್ದಾರೆ.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ, ಇಬ್ಬರು ಜನಪ್ರತಿನಿಧಿಗಳೂ ಮದ್ಯದಂಗಡಿ ತೆರೆಯುವಂತೆ ಮನವಿ ಮಾಡಿದರು. ಜಿಲ್ಲೆಯಲ್ಲಿ ಮೂರು ದಿನ ದಿನಸಿ ಹಾಗೂ ತರಕಾರಿ ಖರೀದಿಗೆ ಅವಕಾಶ ನೀಡಲಾಗಿದೆ. ಆಗ ಮದ್ಯ ಖರೀದಿಗೂ ಅವಕಾಶ ನೀಡಬೇಕು ಎಂಬ ಬೇಡಿಕೆ ಮುಂದಿಟ್ಟರು. ಅದಕ್ಕೆ ಸಭೆಯಲ್ಲಿದ್ದ ಹಿರಿಯ ಅಧಿಕಾರಿಯೊಬ್ಬರು, ‘ಸರ್ಕಾರವೇ ತೀರ್ಮಾನ ತೆಗೆದುಕೊಳ್ಳಬೇಕು. ಜಿಲ್ಲಾಮಟ್ಟದಲ್ಲಿ ಈ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ’ ಎಂದು ಹೇಳಿ ಚರ್ಚೆಗೆ ವಿರಾಮ ಹಾಕಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು