ಶನಿವಾರ, ಫೆಬ್ರವರಿ 29, 2020
19 °C

ಅಧಿಕಾರದಲ್ಲಿರುವ ಶಕ್ತಿಗಳಿಂದ ಸಂವಿಧಾನದ ಆತ್ಮ ಕೊಲ್ಲುವ ಯತ್ನ: ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಂವಿಧಾನದ ಆಶಯಗಳನ್ನೇ ಬಳಸಿಕೊಂಡು ಅಧಿಕಾರಕ್ಕೆ ಬಂದ ಶಕ್ತಿಗಳು ಇಂದು ಅದರ ಆತ್ಮಕ್ಕೇ ಕೈ ಹಾಕಿ ಕೊಲ್ಲುವ ಮಟ್ಟಕ್ಕಿಳಿದಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ಭಾರತೀಯ ಪ್ರಜಾಪ್ರಭುತ್ವದ ಆತ್ಮ ಸಂವಿಧಾನ ಜಾರಿಗೆ ಬಂದ ದಿನವಿದು. ಎಲ್ಲರನ್ನೂ ಸಮಾನರೆಂದು ನೋಡುವ, ಸಮಾನ ಅವಕಾಶ ನೀಡುವ ಸಂವಿಧಾನದ ಆಶಯಗಳನ್ನೇ ಬಳಸಿಕೊಂಡು ಅಧಿಕಾರಕ್ಕೆ ಬಂದ ಶಕ್ತಿಗಳು ಇಂದು ಅದರ ಆತ್ಮಕ್ಕೇ ಕೈ ಹಾಕಿ ಕೊಲ್ಲುವ ಮಟ್ಟಕ್ಕಿಳಿದಿವೆ.ಈ ಮೂಲಕ ಶಾಶ್ವತ ಅಧಿಕಾರ ರಕ್ಷಣೆಗೆ ಮುಂದಾಗಿವೆ. ಇದರ ವಿರುದ್ಧ ಹೋರಾಡುವ ಪಣ ನಮ್ಮದಾಗಲಿ’ ಎಂದು ತಿಳಿಸಿದ್ದಾರೆ’ ಎಂದು ತಿಳಿಸಿದ್ದಾರೆ. 

71ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿ ಟ್ವಿಟರ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು