ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವ: ಮಾಣಿಕ್‌ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

Last Updated 26 ಜನವರಿ 2020, 4:37 IST
ಅಕ್ಷರ ಗಾತ್ರ

ಬೆಂಗಳೂರು: 71ನೇ ಗಣರಾಜ್ಯೋತ್ಸವ ಅಂಗವಾಗಿ ಬೆಂಗಳೂರಿನ ಮಾಣಿಕ್‌ ಷಾ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ ನಮನ ಸಲ್ಲಿಸಿದರು.

ವಿವಿಧ ತುಕಡಿಗಳಿಂದ ಗೌರವ ರಕ್ಷೆ ಸ್ವೀಕರಿಸಿದ ರಾಜ್ಯಪಾಲರು ತೆರೆದ ವಾಹನದಲ್ಲಿ ಕವಾಯತು ವೀಕ್ಷಿಸಿದರು.

ಇದೇ ವೇಳೆ ಮಾತನಾಡಿದ ಅವರು, ‘ದೇಶದಾದ್ಯಂತ ಮೂಲಭೂತ ಕರ್ತವ್ಯಗಳ ಕುರಿತು ಆಂದೋಲನಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ನಾಗರಿಕರಾಗಿ ನಮ್ಮ ಕರ್ತವ್ಯಗಳನ್ನು ನೆನಪಿಸಿಕೊಳ್ಳಬೇಕಾಗಿದೆ’ ಎಂದರು.

‘ಪುರುಷರು ಮಹಿಳೆಯರೊಂದಿಗೆ ಗೌರವದಿಂದ ನಡೆದುಕೊಳ್ಳಲು ಶಿಕ್ಷಣದ ಅವಶ್ಯಕತೆ ಇದೆ’ ಎಂದು ವಜುಭಾಯಿ ವಾಲಾ ತಿಳಿಸಿದರು.

‘ಕಳೆದ ಆಗಸ್ಟ್‌ನಲ್ಲಿ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದ ನಂತರ, 7 ಲಕ್ಷ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಸಂಕಷ್ಟಕ್ಕೊಳಗಾದ 2.07 ಲಕ್ಷ ಕುಟುಂಬಗಳಿಗೆ ತಲಾ ₹10 ಸಾವಿರ ಪರಿಹಾರ ನೀಡಲಾಗಿದೆ’ ಎಂದರು.

ದೇಶದ ಅಭಿವೃದ್ಧಿಗೆ ಶ್ರಮಿಸುವ ನಮ್ಮ ಬದ್ಧತೆಯನ್ನು ಪುನರ್ ನವೀಕರಣ ಮಾಡಬೇಕಾಗಿರುವ ಸಂದರ್ಭವಿದು ಎಂದು ರಾಜ್ಯಪಾಲರು ಪ್ರತಿಪಾದಿಸಿದರು.

ಈ ಸಮಾರಂಭದಲ್ಲಿ ಕೆಎಸ್‌ಆರ್‌ಪಿ, ಸ್ಕೌಟ್ಸ್‌-ಗೈಡ್ಸ್‌, ಎನ್‌ಸಿಸಿ, ಸೇವಾದಳ, ವಿವಿಧ ಶಾಲಾ ಮಕ್ಕಳನ್ನು ಸೇರಿ 1,750 ಮಂದಿ ಪಥಸಂಚಲನದಲ್ಲಿ ಭಾಗಿಯಾದರು. ಕಿಕ್ಕೇರಿ ಕೃಷ್ಣಮೂರ್ತಿ ದೊಡ್ಡವಾಡ ತಂಡದಿಂದ ನಾಡಗೀತೆ ಮತ್ತು ರೈತಗೀತೆ ಮೊಳಗಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT