ಶನಿವಾರ, ಫೆಬ್ರವರಿ 22, 2020
19 °C

ಗಣರಾಜ್ಯೋತ್ಸವ: ಬೆಂಗಳೂರಿನ ಮಾಣಿಕ್‌ ಷಾ ಪರೇಡ್‌ ಮೈದಾನ ಸುತ್ತಮುತ್ತ ಬಿಗಿ ಭದ್ರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 71ನೇ ಗಣರಾಜ್ಯೋತ್ಸವ ಅಂಗವಾಗಿ ನಡೆಯಲಿರುವ ಪಥಸಂಚಲನಕ್ಕೆ ಸಿದ್ದತೆ ನಡೆಸಲಾಗಿದ್ದು, ಮಾಣಿಕ್‌ ಷಾ ಪರೇಡ್‌ ಮೈದಾನದ ಸುತ್ತಮುತ್ತ ಬಿಗಿ ಭದ್ರತೆ ಮಾಡಲಾಗಿದೆ. 

ಎಂಜಿ ರಸ್ತೆ, ಬ್ರಿಗೇಡ್‌ ರಸ್ತೆ, ಕಬ್ಬನ್‌ ರಸ್ತೆ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸೇರಿದಂತೆ ಮಾಣಿಕ್‌ ಷಾ ಮೈದಾನದ ಸುತ್ತಲಿನ ಪ್ರಮುಖ ಜಾಗಗಳಲ್ಲಿ ಪೊಲೀಸರು ಬೆಳಿಗ್ಗೆಯಿಂದ ತಪಾಸಣೆ ಕೈಗೊಂಡಿದ್ದಾರೆ. 

ಬೆಳಗ್ಗೆ 8 ಗಂಟೆಯಿಂದ 10:30ರ ವರೆಗೆ ಎಂಜಿ ರಸ್ತೆ, ಕಬ್ಬನ್‌ ರಸ್ತೆ, ಕಾಮರಾಜ ಮಾರ್ಗಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸಿಟಿಒ ವೃತ್ತ, ಅನಿಲ್‌ ಕುಂಬ್ಳೆ ವೃತ್ತಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲ, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಲಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು