ಮಂಗಳವಾರ, ಜನವರಿ 21, 2020
23 °C

ಯೇಸು ಪ್ರತಿಮೆ ನಿರ್ಮಾಣ ಅನುಮತಿ ಕೋರಿ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‌‌‘ಕನಕಪುರ ತಾಲ್ಲೂಕು ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ಕಾಮಗಾರಿ ಆರಂಭವಾಗಿ 2 ವರ್ಷ ಕಳೆದಿದೆ. ಆದರೆ, ಅನುಮತಿ ಕೋರಿ ಇತ್ತೀಚೆಗೆ ಅರ್ಜಿ ಸಲ್ಲಿಸಲಾಗಿದೆ’ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

‘ಅನುಮತಿ ಕೋರಿ ಡಿಸೆಂಬರ್‌ನಲ್ಲಿ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಕೆ
ಯಾಗಿದೆ. ಈಗ ತರಾತುರಿಯಲ್ಲಿ ದಾಖಲೆಗಳನ್ನು ಸೃಷ್ಟಿಸುವ ಪ್ರಯತ್ನವನ್ನು ಕೆಲವರು ಮಾಡು
ತ್ತಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಹೇಳಿದರು.

‘ಆರು ವರ್ಷಗಳಿಂದ 12–13 ವಿಗ್ರಹಗಳನ್ನು ಬೆಟ್ಟದಲ್ಲಿ ಇಡಲಾಗಿದ್ದು, ರಸ್ತೆ ನಿರ್ಮಾಣವಾಗಿದೆ. ಆದರೆ, ಯಾರು ಈ ಕಾಮಗಾರಿ ನಿರ್ವಹಿಸಿದರು ಎಂಬ ಮಾಹಿತಿಯೇ ಇಲ್ಲ. ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ನೀಡಲಾಗಿದ್ದು, ಈ ಬಗ್ಗೆ ಬೆಸ್ಕಾಂ ಅಧಿಕಾರಿಗಳನ್ನು ಕೇಳಿದರೆ ವರದಿ ನೀಡಲು ಹಿಂಜರಿಯುತ್ತಿದ್ದಾರೆ. ಹೀಗಾಗಿ, ಸಮಯ ನೀಡಿದ್ದೇನೆ’ ಎಂದರು.

ವಿವಾದ ಇದೆ: ಕಪಾಲ ಬೆಟ್ಟದ ವಿವಾದ ಇವತ್ತಿನದಲ್ಲ. ಬಹಳ ಹಿಂದಿನಿಂದಲೇ ಮುನೇಶ್ವರ ಬೆಟ್ಟ ಮತ್ತು ಯೇಸು ಬೆಟ್ಟ ಎಂಬ ವಿವಾದ ಇದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

‘ವಿವಾದದ ಸಂಗತಿ ಡಿ.ಕೆ.ಶಿವಕುಮಾರ್‌ ಅವರಿಗೂ ಗೊತ್ತಿದೆ. ವಿವಾದ ಹುಟ್ಟು ಹಾಕುವ ಕೆಲಸ ಹಿಂದಿನಿಂದಲೂ ನಡೆದುಕೊಂಡೇ ಬಂದಿದೆ. ಅಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನನ್ನ ಆದ್ಯತೆ. ಯಾವುದೇ ರೀತಿಯಲ್ಲೂ ಕಾನೂನು ಸುವ್ಯವಸ್ಥೆಗೆ ಭಂಗ ಆಗದಂತೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದರು.

ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಈ ವಿವಾದ ಎದ್ದಿಲ್ಲ. ಯಾವುದೇ ಕ್ರಿಯೆಗೆ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಅದೇ ರೀತಿ ಈಗ ವಿವಾದ ಎದ್ದಿದೆ. ಪ್ರತಿಭಟನೆ ನಡೆಸುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಆ ಹಕ್ಕನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಬಳ್ಳಾರಿಯಲ್ಲಿ ಶಾಸಕ ಜಮೀರ್‌ ಅಹಮದ್ ಬಂಧನ ಕುರಿತು ಪ್ರತಿಕ್ರಿಯಿಸಿ, ‘ಅಲ್ಲಿ ಕಾನೂನು ಸುವ್ಯ
ವಸ್ಥೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು