28ರೊಳಗೆ ಪ್ರಕಟಿಸಿ: ಹೈಕೋರ್ಟ್‌

7
ಅಧ್ಯಕ್ಷ–ಉಪಾಧ್ಯಕ್ಷ ಮೀಸಲು ಪಟ್ಟಿ

28ರೊಳಗೆ ಪ್ರಕಟಿಸಿ: ಹೈಕೋರ್ಟ್‌

Published:
Updated:

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಸ್ಥಾನಗಳಿಗೆ ಇದೇ 28ರೊಳಗೆ ಮೀಸಲು ನಿಗದಿಪಡಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಸ್ಥಳೀಯ ಸಂಸ್ಥೆಗಳಿಗೆ ಮೀಸಲು ಪಟ್ಟಿ ಪ್ರಕಟಿಸಿಲ್ಲ ಎಂದು ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ಮುಂದುವರಿಸಿತು. ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲರು, ‘ಮೀಸಲು ನಿಗದಿಪಡಿಸಲು 10 ದಿನಗಳ ಕಾಲಾವಕಾಶ ನೀಡಬೇಕು’ ಎಂದು ಮನವಿ ಮಾಡಿದರು. ಇದನ್ನು ನ್ಯಾಯಪೀಠ ಮಾನ್ಯ ಮಾಡಿ, ವಿಚಾರಣೆ ಮುಂದೂಡಿತು.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 1

    Frustrated
  • 0

    Angry

Comments:

0 comments

Write the first review for this !