ಮೋದಿ ಜನಪ್ರಿಯತೆ ಕುಗ್ಗುತ್ತಿರುವುದಕ್ಕೆ ಮೇಲ್ವರ್ಗದವರಿಗೆ ಮೀಸಲಾತಿ: ದೇವೇಗೌಡ

7

ಮೋದಿ ಜನಪ್ರಿಯತೆ ಕುಗ್ಗುತ್ತಿರುವುದಕ್ಕೆ ಮೇಲ್ವರ್ಗದವರಿಗೆ ಮೀಸಲಾತಿ: ದೇವೇಗೌಡ

Published:
Updated:

ಹಾಸನ: ಇತ್ತೀಚೆಗೆ ಕೇಂದ್ರದ ಜನಪ್ರಿಯತೆ ಕುಗ್ಗುತ್ತಿರುವುದಕ್ಕೆ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜಾತಿಯವರಿಗೆ ಮೀಸಲು ನೀಡುವ ಅಸ್ತ್ರವನ್ನು ಮೋದಿ ಬಳಸಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.  

ಬಿಜೆಪಿಯವರು ಚುನಾವಣೆಯಲ್ಲಿ ಗೆಲ್ಲುವ ಭಾವನೆಯಿಂದ ಹೀಗೆ ಮಾಡಿದ್ದಾರೆ. ಇದೇ ಕಾರಣಕ್ಕೆ ಮರು ಮಾತನಾಡದೆ ಎಲ್ಲಾ ಪಕ್ಷದವರೂ ಬೆಂಬಲ ನೀಡಿದ್ದಾರೆ. ಇದು ಸುಪ್ರೀಂ ಕೋರ್ಟ್‌ಗೂ ಹೋಗಿದೆ ಅಲ್ಲಿ ಏನಾಗುತ್ತೋ ಎಂಬುದನ್ನು ನೋಡೋಣ ಎಂದರು ನಾವು ಬ್ರಾಹ್ಮಣ ಸಮುದಾಯಕ್ಕೆ ಏನು ಕೊಡಬೇಕೋ ಅದನ್ನು ‌ಕೊಟ್ಟಿದ್ದೇವೆ. ಈ‌ ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಯಾವ ‌ಪ್ರಧಾನಿ ಅಥವಾ ಸಿಎಂ ಕೂಡ ಬಗೆಹರಿಸಲು ಸಾಧ್ಯವಿಲ್ಲ ಎಂದು ದೇವೇಗೌಡ ಹೇಳಿದರು. 

ಲೋಕಸ‌ಭೆ ಚುನಾವಣೆಯಲ್ಲೂ ಕಾಂಗ್ರೆಸ್‌ನೊಂದಿಗೆ ನಮ್ಮ ಮೈತ್ರಿ ಮುಂದುವರಿಯಲಿದೆ. ನಮಗೆ ಅವರು  ಎಷ್ಟು ಸೀಟು ಕೊಡುತ್ತಾರೋ ಗೊತ್ತಿಲ್ಲ, ಈ ಬಗ್ಗೆ ರಾಹುಲ್ ಗಾಂಧಿ, ವೇಣುಗೋಪಾಲ್, ಸಿದ್ದರಾಮಯ್ಯ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು. 

ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಇನ್ನು ತೀರ್ಮಾನ ಮಾಡಿಲ್ಲ ಎಂದರು. 

ಸಿಬಿಐ ಸೇರಿ ಅನೇಕ ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ ಹೊಸದಲ್ಲ, ಇದು ಇತ್ತೀಚಿನ‌ ದಿನಗಳಲ್ಲಿ ಹೆಚ್ಚಾಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು. 

ಬರಹ ಇಷ್ಟವಾಯಿತೆ?

 • 15

  Happy
 • 0

  Amused
 • 0

  Sad
 • 0

  Frustrated
 • 14

  Angry

Comments:

0 comments

Write the first review for this !