ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಶಾಲೆಗಳ ಶಿಕ್ಷಕರಿಂದ ಹೋರಾಟದ ತೀರ್ಮಾನ

Last Updated 12 ಫೆಬ್ರುವರಿ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರದ ವಸತಿ ಶಾಲೆಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಸಿಬ್ಬಂದಿ ಸಮೇತ ವಿಲೀನಗಳಿಸುವುದೂ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸದ ಕಾರಣ ಹೋರಾಟ ನಡೆಸುವುದಾಗಿ ವಸತಿ ಶಾಲೆಗಳ ನೌಕರರ ಸಂಘ ಎಚ್ಚರಿಕೆ ನೀಡಿದೆ.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಸೇರುವ 819 ವಿವಿಧ ರೀತಿಯ ವಸತಿ ಶಾಲೆಗಳ 4000 ಶಿಕ್ಷಕರು ಮತ್ತು 2011 ಸಿಬ್ಬಂದಿ ಇದ್ದಾರೆ. ಇವರಿಗೆ ಸಂಬಂಧಿಸಿದ ಬೇಡಿಕೆಗಳ ಬಗ್ಗೆ ಇಲಾಖೆ ಸಚಿವರು ನಿಷ್ಕಾಳಜಿ ತೋರಿಸುತ್ತಿದ್ದಾರೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.ಕಳೆದ ಡಿಸೆಂಬರ್‌ ಮತ್ತು ಇದೇ ಜನವರಿಯಲ್ಲಿ ಸಚಿವರು ಸಭೆ ಕರೆದಿದ್ದರು. ಆದರೆ, ಈ ಸಭೆಯಲ್ಲಿ ಬೇಡಿಕೆಗಳಿಗೆ ಸಂಬಂಧಿಸಿದಂತೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT