‘ಮೈತ್ರಿ’ ಕಾರ್ಯವೈಖರಿಗೆ ಅಸಮಾಧಾನ: ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ– ರಘು ಆಚಾರ್‌

7

‘ಮೈತ್ರಿ’ ಕಾರ್ಯವೈಖರಿಗೆ ಅಸಮಾಧಾನ: ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ– ರಘು ಆಚಾರ್‌

Published:
Updated:

ಚಿತ್ರದುರ್ಗ: ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿ ಕುರಿತು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ರಘು ಆಚಾರ್‌, ವಿಧಾನಪರಿಷತ್‌ ಸದಸ್ಯ ಸ್ಥಾನ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ.

ಚಿತ್ರದುರ್ಗಕ್ಕೆ ಮಂಜೂರಾಗಿದ್ದ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ಅನುದಾನ ಬಿಡುಗಡೆ ಮಾಡುವಲ್ಲಿ ಉಂಟಾಗುತ್ತಿರುವ ವಿಳಂಬದಿಂದ ಬೇಸತ್ತು ಈ ನಿರ್ಧಾರ ಕೈಗೊಂಡಿದ್ದಾರೆ. ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವುದಾಗಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ.

‘ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಟೆಂಪಲ್‌ ರನ್‌ನಲ್ಲಿ ನಿರತರಾಗಿದ್ದಾರೆ. ಶಾಸಕರನ್ನು ಭೇಟಿ ಮಾಡಲು ಅವರಿಗೆ ಸಮಯವಿಲ್ಲ. ಈ ಕುರಿತು ಸಿದ್ದರಾಮಯ್ಯ ಅವರ ಜೊತೆ ಹಲವು ಬಾರಿ ಚರ್ಚಿಸಿದ್ದೇವೆ. ಚಿತ್ರದುರ್ಗ ಹಾಗೂ ದಾವಣಗೆರೆ ಜನರೇ ನನ್ನ ದೇವರು. ಅವರಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧ’ ಎಂದು ಹೇಳಿದರು.

‘ಚಿತ್ರದುರ್ಗ ನಗರ ನೋಡಿದರೆ ಬೇಸರವಾಗುತ್ತದೆ. ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಅನುದಾನವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು. ಜನರ ಋಣ ತೀರಿಸುವ ಜವಾಬ್ದಾರಿ ನಮ್ಮ ಮೇಲಿದೆ. ಮತ್ತೆ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಗೆಲ್ಲುವ ಶಕ್ತಿ ನನ್ನಲ್ಲಿದೆ. ಪಕ್ಷಕ್ಕಿಂತ ಜನರೇ ದೊಡ್ಡವರು’ ಎಂದರು.

ಬರಹ ಇಷ್ಟವಾಯಿತೆ?

 • 15

  Happy
 • 1

  Amused
 • 0

  Sad
 • 1

  Frustrated
 • 5

  Angry

Comments:

0 comments

Write the first review for this !