ಭಾನುವಾರ, ಮಾರ್ಚ್ 26, 2023
31 °C

ತೀರ್ಪು ಗೌರವಿಸುತ್ತೇವೆ: ರಮೇಶ್‌ಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮತದಾರರು ಕೊಟ್ಟ ತೀರ್ಪನ್ನು ಗೌರವಿಸುತ್ತೇನೆ. ಕಾಂಗ್ರೆಸ್‌ ಪಕ್ಷವು ಈ ಫಲಿತಾಂಶವನ್ನು ಧೈರ್ಯದಿಂದ ಮತ್ತು ಸಮಚಿತ್ತದಿಂದ ಸ್ವೀಕರಿಸುತ್ತದೆ’ ಎಂದು ವಿಧಾನಸಭೆ ಮಾಜಿ ಸ್ಪೀಕರ್‌ ಹಾಗೂ ಶಾಸಕ ಕೆ.ಆರ್‌.ರಮೇಶ್‌ಕುಮಾರ್‌ ಹೇಳಿದರು.

ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಚುನಾವಣೆಯಲ್ಲಿ ಹಣ ಕೊಡುವ ಮತ್ತು ಪಡೆಯುವ ರಾಜಕಾರಣ ನನಗೆ ಗೊತ್ತಿಲ್ಲ’ ಎಂದು ಮಾರ್ಮಿಕವಾಗಿ ನುಡಿದರು.

ರಮೇಶ್‌ಕುಮಾರ್‌ ಸ್ಪೀಕರ್‌ ಸ್ಥಾನದಲ್ಲಿ ಕುಳಿತು ನೀಡಿದ್ದ ತೀರ್ಪನ್ನು ಮತದಾರರು ಅನರ್ಹ ಮಾಡಿದ್ದಾರೆ ಎಂದು ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್‌ ಹೆಬ್ಬಾರ್‌ ನೀಡಿರುವ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ‘ನಾನು ಯಾರನ್ನೂ ವೈಯಕ್ತಿಕವಾಗಿ ಅನರ್ಹಗೊಳಿಸಿಲ್ಲ. ಸಂವಿಧಾನಬದ್ಧವಾಗಿ ನಿರ್ಣಯ ಕೈಗೊಂಡಿದ್ದೆ. ಶಿವರಾಮ್‌ ಹೆಬ್ಬಾರ್‌ ಅದನ್ನೇ ತಪ್ಪು ಎನ್ನುವುದಾದರೆ ಮತದಾರರು ಚುನಾವಣೆಯಲ್ಲಿ ಸಂವಿಧಾನವನ್ನೇ ಅನರ್ಹಗೊಳಿಸಿದ್ದಾರೆ ಎಂಬ ಅರ್ಥ ಬರುತ್ತದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು