ಶನಿವಾರ, ಜುಲೈ 24, 2021
22 °C

ಪಹಣಿ ಲೋಪದೋಷ ಸರಿಪಡಿಸಲು ಕಂದಾಯ ಅದಾಲತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗಣಕೀಕೃತ ಪಹಣಿಗಳಲ್ಲಿ ಇರುವ ಲೋಪದೋಷ ಸರಿಪಡಿಸಲು ಕಂದಾಯ ಇಲಾಖೆಯು ‘ಕಂದಾಯ ಅದಾಲತ್‌’ ನಡೆಸಲು ತೀರ್ಮಾನಿಸಿದೆ.

ದಕ್ಷಿಣಕನ್ನಡ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕಂದಾಯ ಅದಾಲತ್‌ ನಡೆಸಲಾಗುವುದು. ಇದಕ್ಕಾಗಿ ಕಂದಾಯ ಇಲಾಖೆ ಮಾರ್ಗಸೂಚಿಯನ್ನೂ ಹೊರಡಿಸಿದೆ.

ಕಂದಾಯತ್‌ ಅದಾಲತ್‌ ನಡೆಸಲು ಇಲಾಖೆ ಸಿಬ್ಬಂದಿಯನ್ನೇ ಬಳಸಿಕೊಳ್ಳಬೇಕು. ಈ ಹಿಂದೆ ಜಿಲ್ಲೆಗೆ ಇಬ್ಬರು ನಿವೃತ್ತ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಸೂಚನೆ ನೀಡಲಾಗಿತ್ತು. ಈಗ ಅದರ ಅಗತ್ಯವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಿದ್ದುಪಡಿಗಾಗಿ ಬಾಕಿ ಇರುವ ಮತ್ತು ಸ್ವೀಕೃತವಾಗುವ ಅರ್ಜಿಗಳನ್ನು 2020 ರ ಡಿಸೆಂಬರ್‌ 31 ರೊಳಗೆ ಪೂರ್ಣಗೊಳಿಸಬೇಕು. ಅದನ್ನು ಮುಂದುವರಿಸುವುದಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು