ಶಿವಮೊಗ್ಗ: ಜಿಲ್ಲೆಯ ಹಲವೆಡೆ ಭಾರಿ ಮಳೆ

7

ಶಿವಮೊಗ್ಗ: ಜಿಲ್ಲೆಯ ಹಲವೆಡೆ ಭಾರಿ ಮಳೆ

Published:
Updated:

ಶಿವಮೊಗ್ಗ: ಜಿಲ್ಲೆಯ ಹಲವೆಡೆ ಗುರುವಾರ ಭಾರಿ ಮಳೆ ಸುರಿದಿದೆ.

ಒಂದು ವಾರದಿಂದ ಬಿಡುವು ನೀಡಿದ್ದ ಮಳೆ ಮತ್ತೆ ಅಬ್ಬರಿಸಿದೆ. ಹೊಸನಗರ, ತೀರ್ಥಹಳ್ಳಿಯಲ್ಲಿ ಧಾರಾಕಾರ ಮಳೆ ಸುರಿದಿದೆ.

ಮಳೆಗೆ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಸಮೀಪದ ಸಮಕಾನಿಯಲ್ಲಿ  ಬುಧವಾರ ಜಗದೀಶ್ ಎಂಬುವವರ ಮನೆಯ ಗೋಡೆ ಕುಸಿದಿದೆ. ಮನೆ ಸದಸ್ಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ತುಂಗಾ ಜಲಾನಯನ ಪ್ರದೇಶದಲ್ಲಿ ಜೋರು ಮಳೆಯಾಗುತ್ತಿದೆ. ಗಾಜನೂರಿನ ಜಲಾಶಯಕ್ಕೆ 39,325 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಹತ್ತು ಕ್ರಸ್ಟ್‌ ಗೇಟ್‌ಗಳ ಮೂಲಕ 37,162 ಕ್ಯೂಸೆಕ್ ನೀರು ನದಿಗೆ ಹರಿಸಲಾಗುತ್ತಿದೆ.

ಶಿವಮೊಗ್ಗ ನಗರದಲ್ಲೂ ಜೋರು ಮಳೆ ಸುರಿದರೆ, ಭದ್ರಾವತಿ, ಸಾಗರ, ಶಿಕಾರಿಪುರ, ತುಂತುರು ಮಳೆಯಾಗಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !