ಶನಿವಾರ, ಏಪ್ರಿಲ್ 10, 2021
32 °C

ಬೆಳಗಾವಿ: ಕಾರಿನ ಟೈರ್‌ ಸ್ಫೋಟಗೊಂಡು ಲಾರಿಗೆ ಡಿಕ್ಕಿ, ಸ್ಥಳದಲ್ಲೇ ಐವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಹೊರವಲಯದ ಶ್ರೀನಗರ ಬಳಿಯ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ಕಾರಿನ ಟೈರ್‌ ಸ್ಫೋಟಗೊಂಡು ಲಾರಿಗೆ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿ ಐವರು ಮೃತಪಟ್ಟರು.

ಮೃತರನ್ನು ಔರಂಗಾಬಾದ್ ದೇವಗಿರಿಯ ನಿವಾಸಿಗಳು ಎನ್ನಲಾದ ನಂದು ಪವಾರ್, ಅಮೂಲ ನಾವಿ, ಸುರೇಶ್ ಕಾನೇರಿ, ಅಮೂಲ ಚೌರಿ, ಮಹೇಶ್ ಚೌರಿ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೊಲ್ಹಾಪುರದಿಂದ ಗೋವಾಕ್ಕೆ ಹೋಗುತ್ತಿದ್ದರು ಎಂದು ತಿಳಿದುಬಂದಿದೆ.

ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್‌ಕುಮಾರ್, ಡಿಸಿ‍ಪಿ ಯಶೋದಾ ಒಂಟಗೋಡಿ, ಎಸಿಪಿ ಎನ್.ವಿ. ಭರಮನಿ ಭೇಟಿ ನೀಡಿ ಪರಿಶೀಲಿಸಿದರು.

ಘಟನೆಯಿಂದಾಗಿ, ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು