ಕಾರು – ಲಾರಿ ಡಿಕ್ಕಿ: ಸ್ಥಳದಲ್ಲೇ ಐವರು ಸಾವು

ಮಂಗಳವಾರ, ಜೂನ್ 18, 2019
29 °C

ಕಾರು – ಲಾರಿ ಡಿಕ್ಕಿ: ಸ್ಥಳದಲ್ಲೇ ಐವರು ಸಾವು

Published:
Updated:

ಧಾರವಾಡ: ನವಲಗುಂದ ಅಮರಗೊಳ ಕ್ರಾಸ್ ಬಳಿ ಕಾರು ಮತ್ತು ಲಾರಿ ನಡುವೆ ಸಂಭವಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಿರುಚನಾಪಳ್ಳಿಯ ರವಿ ಜಂಬುಲಿಂಗಪ್ಪ ಹಂಡಿ(48), ಲೇಖಶ್ರೀ ಹಂಡಿ(19), ನವೀನ್ ಖನ್ನಾ(16), ಹಾಗೂ ಬಾಗಲಕೋಟೆಯ ಶರಣ ಜಿಗಜಿನ್ನಿ (10), ವರ್ಷಾ ಜಿಗಜಿನ್ನಿ (12) ಮೃತಪಟ್ಟವರು ಎಂದು ಗುರುತಿಸಲಾಗಿದೆ. 

ದಾವಣಗೆರೆಯಿಂದ ಬಾಗಲಕೋಟೆ ಕಡೆ ಹೋಗುತ್ತಿದ್ದ ಫೋರ್ಡ್ ಕಾರಿನ ಮುಂಭಾಗದ ಟೈರ್ ಸ್ಪೋಟಗೊಂಡ ಪರಿಣಾಮ ಕಾರು ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಲಾರಿಗೆ ರಭಸದಲ್ಲಿ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಕಾರಿನಲ್ಲಿದ್ದ ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ನವಲಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 5

  Happy
 • 1

  Amused
 • 13

  Sad
 • 1

  Frustrated
 • 2

  Angry

Comments:

0 comments

Write the first review for this !