ಶನಿವಾರ, ಜುಲೈ 31, 2021
21 °C

ಆರೋಪಿಗೆ ಕೊರೊನಾ; ಬೈಯಪ್ಪನಹಳ್ಳಿ ಠಾಣೆ ಸೀಲ್‌ಡೌನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸುಲಿಗೆ ಆರೋಪದಡಿ ಬಂಧಿಸಲಾಗಿದ್ದ ಆರೋಪಿಯೊಬ್ಬನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಬೈಯಪ್ಪನಹಳ್ಳಿ ಠಾಣೆಯನ್ನು ಸೋಮವಾರ ಸೀಲ್‌ಡೌನ್ ಮಾಡಲಾಗಿದೆ.

ಜೀವನ್‌ಬಿಮಾನಗರ ಬಳಿಯ ನಿವಾಸಿಯಾದ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದ ಠಾಣೆಯ ಪಿಎಸ್‌ಐ ಸೇರಿ 17 ಸಿಬ್ಬಂದಿಯನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

ಸುಲಿಗೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಇತ್ತೀಚೆಗಷ್ಟೇ  ಬಂಧಿಸಿದ್ದರು. ಮೂವರನ್ನೂ ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದರು. ಅವರ ವರದಿ ಸೋಮವಾರ ಬಂದಿದ್ದು, ಒಬ್ಬಾತನಲ್ಲಿ ಸೋಂಕು ಇರುವುದು ಖಾತ್ರಿಯಾಗಿದೆ. ಇನ್ನಿಬ್ಬರನ್ನೂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. 

‘ಆರೋಪಿ ಠಾಣೆಯಲ್ಲಿದ್ದ. ಹೀಗಾಗಿ, ತಾತ್ಕಾಲಿಕವಾಗಿ ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು