ಬುಧವಾರ, ಫೆಬ್ರವರಿ 26, 2020
19 °C

ರೇಷ್ಮೆ ಇಲಾಖೆಗೆ ರೋಹಿಣಿ ವರ್ಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯ ಹಣವನ್ನು ನೆರೆ ಪರಿಹಾರ ಹಾಗೂ ಅನ್ಯ ಉದ್ದೇಶಕ್ಕೆ ಬಳಸಲು ಅವಕಾಶ ನೀಡದ ಕಾರಣಕ್ಕೆ ವರ್ಗಾವಣೆ ಶಿಕ್ಷೆಗೆ ಗುರಿಯಾಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸರ್ಕಾರ ಕೊನೆಗೂ ಸ್ಥಳ ತೋರಿಸಿದೆ.

ಕಟ್ಟಡ ಹಾಗೂ ನಿರ್ಮಾಣ ಕೆಲಸಗಾರರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ, ಸ್ಥಳ ತೋರಿಸಿರಲಿಲ್ಲ. ಈಗ ರೇಷ್ಮೆ ಅಭಿವೃದ್ಧಿ ಆಯುಕ್ತರನ್ನಾಗಿ ವರ್ಗಾಯಿಸಿದ್ದು, ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯಲ್ಲಿದ್ದ ₹8 ಸಾವಿರ ಕೋಟಿಯಲ್ಲಿ ₹3 ಸಾವಿರ ಕೋಟಿಯನ್ನು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ನೀಡಬೇಕು. ಕಾರ್ಮಿಕರು ಹಾಗೂ ಅವರ ಮಕ್ಕಳ ಕಲ್ಯಾಣಕ್ಕಾಗಿ ತಂತ್ರಜ್ಞಾನ ಆಧಾರಿತ ಸೇವೆಯನ್ನು ಟೆಂಡರ್ ಕರೆಯದೇ ಕಿಯೋನಿಕ್ಸ್‌ಗೇ ಕೊಡಬೇಕು ಎಂದು ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಒತ್ತಡ ಹಾಕುತ್ತಿದ್ದರು. ಇದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಸ್ಥಳ ತೋರಿಸದೆ ವರ್ಗಾವಣೆ ಮಾಡಲಾಗಿತ್ತು.

ಕಾರ್ಮಿಕರ ನಿಧಿ ರಕ್ಷಿಸಲು ಮುಂದಾದ ಅಧಿಕಾರಿಯನ್ನು ವರ್ಗಾಯಿಸುವ ಮೂಲಕ ಶಿಕ್ಷೆ ನೀಡಲಾಗಿದೆ ಎಂದು ಅಧಿಕಾರಿ ವರ್ಗ ಹಾಗೂ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಸಾಮಾಜಿಕ ಜಾಲ ತಾಣದಲ್ಲೂ ಆಕ್ಷೇಪಗಳು ಕೇಳಿ ಬಂದಿದ್ದವು. ಮತ್ತೆ ಕಾರ್ಮಿಕ ಇಲಾಖೆಗೆ ವರ್ಗಾವಣೆ ಮಾಡಬೇಕು ಎಂಬ ಒತ್ತಡ ಹೆಚ್ಚುತ್ತಿರುವುದನ್ನು ಮನಗಂಡ ಸರ್ಕಾರ, ರೇಷ್ಮೆ ಇಲಾಖೆಗೆ ವರ್ಗಾಯಿಸಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು