ಮೈಸೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಆರ್‌ಎಸ್‌ಎಸ್ ಮೂಗು ತೂರಿಸುವುದಿಲ್ಲ ಎಂದು ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಬುಧವಾರ ಇಲ್ಲಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಧ್ಯಕ್ಷರ ಬದಲಾವಣೆ ವಿಷಯವನ್ನು ಪಕ್ಷದ ಹೈಕಮಾಂಡ್ ನೋಡಿಕೊಳ್ಳುತ್ತದೆ. ಅದಕ್ಕೂ ಸಂಘಕ್ಕೂ ಯಾವುದೇ ಸಂಬಂಧವಿಲ್ಲ. ಆರ್‌ಎಸ್‌ಎಸ್‌ನ ಯಾರೂ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಲ್ಲ’ ಎಂದು ಸ್ಪಷ್ಟಪಡಿಸಿದರು.

ರಾಜ್ಯ ಸರ್ಕಾರದ ಕಾರ್ಯವೈಖರಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂಬಂತೆ ಭಾಸವಾಗುತ್ತಿದೆ. ಕೇವಲ 37 ಸ್ಥಾನಗಳನ್ನು ಗೆದ್ದುಕೊಂಡ ಪಕ್ಷದ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಯಾಗಿರುವುದು ಪ್ರಜಾಪ್ರಭುತ್ವದ ವಿಡಂಬನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.