ಗುರುವಾರ , ಫೆಬ್ರವರಿ 27, 2020
19 °C
ಜನಜಾಗೃತಿ ಸಮಾವೇಶದಲ್ಲಿ ಸಿಪಿಐ ಮುಖಂಡ ಸಿದ್ಧನಗೌಡ ಪಾಟೀಲ ಟೀಕೆ

ಭಾರತವೆಂಬ ಶಾಂತಿತೋಟಕ್ಕೆ ಆರ್‌ಎಸ್‌ಎಸ್‌ ವೈರಸ್: ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ನಮ್ಮ ದೇಶ ಸರ್ವಜನಾಂಗದ ಶಾಂತಿಯ ತೋಟ. ಇಂತಹ ತೋಟಕ್ಕೆ ಆರ್‌ಎಸ್‌ಎಸ್‌ ಎಂಬ ವೈರಸ್‌ ಹರಡುತ್ತಿದೆ. ನಾವೆಲ್ಲರೂ ಒಗ್ಗೂಡಿ ಪ್ರತಿಭಟಿಸುವ ಮೂಲಕ ಈ ವೈರಸ್ ಅನ್ನು ನಿಯಂತ್ರಿಸಬೇಕು’ ಎಂದು ಸಿಪಿಐ ಹಿರಿಯ ಮುಖಂಡ ಸಿದ್ದನಗೌಡ ಪಾಟೀಲ ತಿಳಿಸಿದರು.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ (ಆರ್‌ಪಿಐ) ರಾಜ್ಯ ಘಟಕದ ವತಿಯಿಂದ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ವಿರುದ್ಧ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಸಜ್ಜಾಗಿರುವ ಆರ್‌ಎಸ್ಎಸ್‌ ತ್ರಿವರ್ಣ ಧ್ವಜವನ್ನೇ ಒಪ್ಪಿಕೊಂಡಿಲ್ಲ. ಇಡೀ ದೇಶ ಗೌರವಿಸುವ ಕೇಸರಿ, ಬಿಳಿ, ಹಸಿರು ಬಣ್ಣದ ಧ್ವಜಕ್ಕಿಂತ ತಮ್ಮ ಕೇಸರಿಧ್ವಜಕ್ಕೆ ಹೆಚ್ಚು ಗೌರವ ನೀಡುತ್ತಾರೆ’ ಎಂದರು.

‘ಸಂವಿಧಾನ ಅಪಾಯದಲ್ಲಿ ಸಿಲುಕಿದ್ದು, ಅದರ ಮಹತ್ವವೂ ಹೆಚ್ಚಾಗಿದೆ. ದೇಶದಲ್ಲಿ ನಡೆಯುತ್ತಿರುವ ಚಳವಳಿ ಹಾಗೂ ಪ್ರತಿಭಟನೆಗಳಿಂದ ಜನಸಾಮಾನ್ಯರೆಲ್ಲ ಸಂವಿಧಾನದ ಬಗ್ಗೆ ತಿಳಿದುಕೊಳ್ಳುತ್ತಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವಅಮಿತ್‌ ಶಾ ಅವರಿಗೆ ಧನ್ಯವಾದಗಳು’ ಎಂದರು.

ಲೇಖಕ ಬಂಜಗೆರೆ ಜಯಪ್ರಕಾಶ್, ‘ಮೋದಿ ಅಧಿಕಾರಕ್ಕೆ ಬಂದ ಮೇಲೆ ಮಸೂದೆಗಳ ಪರ್ವನಡೆದಿದೆ. ದೇಶದ ಹಿಂದಿನ ಸ್ಥಿತಿಗತಿಗಳನ್ನು ಅರಿಯದೆ, ಮಸೂದೆಗಳನ್ನು ಜಾರಿ ಮಾಡುವ ಮೂಲಕ ಅದನ್ನೇ ಭಾರತದ ಪ್ರಗತಿ ಎಂದು ಬಿಂಬಿಸುತ್ತಿದ್ದಾರೆ’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು