ಗುರುವಾರ , ಜುಲೈ 29, 2021
23 °C

ಹೊರಗುತ್ತಿಗೆ ನೌಕರನಿಗೆ ಕೋವಿಡ್‌–19 ದೃಢ: ಆರ್‌ಟಿಒ ಕಚೇರಿ ಸೀಲ್‌ಡೌನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹೊಸಪೇಟೆ: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯ (ಆರ್‌.ಟಿ.ಒ.) ಹೊರಗುತ್ತಿಗೆ ನೌಕರನಿಗೆ ಕೋವಿಡ್‌–19 ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇಡೀ ಕಚೇರಿಯನ್ನು ಬುಧವಾರ ಸೀಲ್‌ಡೌನ್‌ ಮಾಡಲಾಗಿದೆ.

ಜೂ. 12ರಂದು ನೌಕರನಿಗೆ ಕೆಮ್ಮು, ನೆಗಡಿ ಇತ್ತು. ರೋಗ ಲಕ್ಷಣ ಇದ್ದದ್ದರಿಂದ ಗಂಟಲಿನ ದ್ರವ ಪಡೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಕೊರೊನಾ ಸೋಂಕು ತಗುಲಿರುವುದು ಪರೀಕ್ಷೆಯಿಂದ ದೃಢಪಟ್ಟಿದೆ. ನೌಕರನನ್ನು ಸಂಡೂರಿನ ಸಂಜೀವಿನಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸೋಂಕಿತನ ಪ್ರಥಮ ಸಂಪರ್ಕಕ್ಕೆ ಕಚೇರಿಯ 13 ಜನ ಸಿಬ್ಬಂದಿ, ಕಚೇರಿ ಕೆಲಸಕ್ಕೆ ಬಂದಿದ್ದ ಹೊರಗಿನ 10 ಜನರನ್ನು ನಗರದ ಖಾಸಗಿ ಹೋಟೆಲ್‌ನಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಸದ್ಯ ಕಚೇರಿಯನ್ನು ಸೀಲ್‌ಡೌನ್‌ ಮಾಡಲಾಗಿದ್ದು, ಕಚೇರಿಯ ದೈನಂದಿನ ಕೆಲಸ ಸ್ಥಗಿತಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು