ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಪಿಎಸ್‌: ಎರಡು ಘಟಕಗಳಲ್ಲಿ ಉತ್ಪಾದನೆ ಆರಂಭ

Last Updated 22 ಅಕ್ಟೋಬರ್ 2018, 17:50 IST
ಅಕ್ಷರ ಗಾತ್ರ

ಶಕ್ತಿನಗರ (ರಾಯಚೂರು ಜಿಲ್ಲೆ): ಕಲ್ಲಿದ್ದಲು ಸಮಸ್ಯೆಯಿಂದ ಸ್ಥಗಿತಗೊಂಡಿದ್ದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್) ಎರಡು ವಿದ್ಯುತ್ ಘಟಕಗಳ ಉತ್ಪಾದನೆ ಸೋಮವಾರ ಪುನರಾರಂಭವಾಯಿತು.

‘210 ಮೆಗಾವಾಟ್ ಸಾಮರ್ಥ್ಯದ 2ನೇ ವಿದ್ಯುತ್ ಘಟಕ ಹಾಗೂ 250 ಮೆಗಾವಾಟ್ ಸಾಮರ್ಥ್ಯದ 8ನೇ ವಿದ್ಯುತ್ ಘಟಕದ ಉತ್ಪಾದನೆಗೆ ಚಾಲನೆ ನೀಡಲಾಗಿದ್ದು, ಒಟ್ಟು ಎಂಟು ಘಟಕಗಳ ಪೈಕಿ ನಾಲ್ಕು ಘಟಕಗಳಲ್ಲಿವಿದ್ಯುತ್‌ ಉತ್ಪಾದನೆ ಆಗುತ್ತಿದೆ. ನಾಲ್ಕು ವಿದ್ಯುತ್‌ ಘಟಕಗಳ ಉತ್ಪಾದನೆಗೆ ಸಾಕಾಗುವಷ್ಟು ಅಂದರೆ ದಿನಕ್ಕೆ 10 ಸಾವಿರ ಟನ್ ಕಲ್ಲಿದ್ದಲು ಬರುತ್ತಿದೆ’ ಎಂದು ಆರ್‌ಟಿಪಿಎಸ್‌ ಪ್ರಭಾರ ಕಾರ್ಯನಿರ್ವಾಹಕ ನಿರ್ದೇಶಕ ಸಿ.ಬಿ.ಯಲ್ಲಟ್ಟಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT