ಗುರುವಾರ , ಜೂನ್ 17, 2021
21 °C

ಗ್ರಾಮೀಣ ಭಾಗದಲ್ಲಿ 4 ತಿಂಗಳೊಳಗೆ ಇಂಟರ್ನೆಟ್‌ ಸುಧಾರಣೆ: ಅಶ್ವತ್ಥನಾರಾಯಣ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕೇಂದ್ರ ಸರ್ಕಾರದ ಸಹಯೋಗದ ಭಾರತ್‌ ನೆಟ್‌ ಯೋಜನೆಯನ್ನು ಚುರುಕುಗೊಳಿಸುವ ಮೂಲಕ ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ನೀಡಿರುವ ಇಂಟರ್ನೆಟ್‌ ಸಂಪರ್ಕದ ಗುಣಮಟ್ಟ ಸುಧಾರಣೆಗೆ ಪ್ರಯತ್ನಿಸಲಾಗುವುದು’ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಗ್ರಾಮೀಣ ಭಾಗಗಳಲ್ಲಿ ಇಂಟರ್ನೆಟ್ ಸಂಪರ್ಕ ಸುಧಾರಿಸುವ ಸಂಬಂಧ ಅಧಿಕಾರಿಗಳು, ವಿವಿಧ ಏಜೆನ್ಸಿ ಮುಖ್ಯಸ್ಥರ ಜತೆ ಮಂಗಳವಾರ ವಿಡಿಯೊ ಸಂವಾದ ನಡೆಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.

‘ನೆಟ್‌ವರ್ಕ್ ಗುಣಮಟ್ಟ ಸುಧಾರಣೆಗೆ ಸೂಕ್ತ ಕ್ರಮ ಕೈಗೊಳ್ಳು ವಂತೆ ಸಭೆಯಲ್ಲಿ ಸೂಚಿಸಲಾಗಿದೆ. ಮೂರ್ನಾಲ್ಕು ತಿಂಗಳಲ್ಲಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಭಾರತ್‌ ನೆಟ್‌ ಯೋಜನೆಯನ್ನು ಬೇರೆ ಏಜನ್ಸಿಗೆ ಕೊಡುವ ಪ್ರಸ್ತಾವನೆಯೂ ಸರ್ಕಾರದ ಮುಂದೆ ಇದೆ. ಕೇಂದ್ರ ಸರ್ಕಾರದ ಅನುಮತಿ ಪಡೆದು ಯೋಜನೆ ಮುಂದುವರಿಸಲಾಗುವುದು’ ಎಂದು ಅಶ್ವತ್ಥನಾರಾಯಣ ಅವರು ತಿಳಿಸಿದರು.

‘ಪ್ರಜಾವಾಣಿ’ಯ ‘ಅನುಭವ ಮಂಟಪ’ದಲ್ಲಿ ಆನ್‌ಲೈನ್‌ ಶಿಕ್ಷಣದ ಕುರಿತು ಚರ್ಚೆ ವೇಳೆ ಗ್ರಾಮೀಣ ಭಾಗದ ಇಂಟರ್ನೆಟ್‌ ಸಂಪರ್ಕ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಲಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು