ಮಂಗಳವಾರ, ಸೆಪ್ಟೆಂಬರ್ 21, 2021
26 °C

ಅನ್ನಭಾಗ್ಯ ಯೋಜನೆ ತಂದಿದ್ದು ಮೋದಿ; ದೇಶಪಾಂಡೆ ತಬ್ಬಿಬ್ಬು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ:  ತಾಲ್ಲೂಕಿನ ಹೊನಗಾದಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿಯನ್ನು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಶನಿವಾರ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು ಯಾರು?' ಎಂದು ಕೇಳಿದರು.

ಗುಂಪಿನಲ್ಲಿ ಹಿಂಬದಿ ನಿಂತಿದ್ದ ಮಹಿಳೆಯರು  ‘ಮೋದಿ ಮೋದಿ...’ ಎಂದು ಕೂಗಿದರು. ಇದರಿಂದಾಗಿ, ಸಚಿವರು ಕೆಲಕ್ಷಣ ತಬ್ಬಿಬ್ಬಾದರು. ನಗುತ್ತಲೇ ಸುಮ್ಮನಾದರು. ನಂತರ ಕೆಲವರು ಸಿದ್ದರಾಮಯ್ಯ ಎಂದು ಕೂಗಿದರು. ಇದರಿಂದ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟರು.

ಇದನ್ನೂ ಓದಿ... ನರೇಗಾ ಯೋಜನೆ: ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿದ ಸಚಿವ ದೇಶಪಾಂಡೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು