ಎಸ್.ಆರ್. ಹಿರೇಮಠ್ ಆರೋಪ
‘ರಾಜಕೀಯ ಇಚ್ಛಾಶಕ್ತಿಗೆ ಅರಣ್ಯ ಹಕ್ಕು ಕಾಯ್ದೆ ಬಳಕೆ’

ಹೊಸನಗರ: ‘ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅರಣ್ಯ ಹಕ್ಕು ಕಾಯ್ದೆಯನ್ನು ತಮ್ಮ ರಾಜಕೀಯ ಹಿತಾಸಕ್ತಿಗೆ ಬಳಸಿಕೊಂಡಿದ್ದಾರೆ’ ಎಂದು ಸಮಾಜ ಪರಿವರ್ತನಾ ವೇದಿಕೆಯ ಸಂಚಾಲಕ ಎಸ್.ಆರ್. ಹಿರೇಮಠ್ ಆರೋಪಿಸಿದರು.
‘ತಮ್ಮ ಮಾತಿಗೆ ಸ್ಪಂದಿಸದ ಸಚ್ಚಾರಿತ್ರ್ಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಹೋರಾಟದಲ್ಲಿ ಹಿರಿಯರು ಆಗಿದ್ದರೂ ಕಾನೂನು ಮೀರಿ ಅರಣ್ಯ ಭೂಮಿ ಮಂಜೂರಾತಿಯಲ್ಲಿ ಮಾಡಿದ ಕ್ರಮವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು’ ಎಂದರು.
ಪರಿಸರ ಉಳಿವಿಗಾಗಿ ಹೋರಾಟ ಮಾಡುತ್ತಿರುವ ಜನ ಸಂಗ್ರಾಮ ಪರಿಷತ್ತಿನ ಸಂಚಾಲಕ ಗಿರೀಶ್ ಆಚಾರಿ ಅವರ ಮೇಲೆ ಕೊಲೆ ಯತ್ನ, ಮಾನ ಹಾನಿ ನಡೆಯುತ್ತಿರುವುದನ್ನು ಖಂಡಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.