ಶನಿವಾರ, ಮಾರ್ಚ್ 28, 2020
19 °C

ಪರೀಕ್ಷೆ ಕೇಂದ್ರಗಳಿಗೆ ಸಚಿವ ಸುರೇಶ್‌ ಕುಮಾರ್‌ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಶಿಕ್ಷಣ ಸಚಿವ.ಎಸ್.ಸುರೇಶ್ ಕುಮಾರ್ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ವಿವಿಧ ಕಾಲೇಜುಗಳಿಗೆ ಭೇಟಿ ಪರೀಕ್ಷಾ ನಿರ್ವಹಣೆಯ ಬಗ್ಗೆ ಪರಿಶೀಲಿಸಿ ಮಾಹಿತಿ‌ ಪಡೆದರು.

ಬಿ.ಎಂ.ಎಸ್ ಮಹಿಳಾ ಕಾಲೇಜು, ಬಸವನಗುಡಿಯ ನ್ಯಾಷನಲ್ ಕಾಲೇಜು ಹಾಗೂ‌ ಜಯನಗರದ‌ ವಿಜಯ ಕಾಲೇಜುಗಳಿಗೆ ಭೇಟಿ ನೀಡಿದರು. ಯಾವುದೇ ಅಹಿತಕರ‌ವಾದ ಘಟನೆಯಾಗಿಲ್ಲದಿರುವ ಬಗ್ಗೆ ಮಾಹಿತಿ ಪಡೆದರು.

ದ್ವಿತೀಯ ಪಿಯುಸಿಯ ಕೆಮಿಸ್ಟ್ರಿ, ಬಿಸಿನೆಸ್ ಸ್ಟಡೀಸ್‌ ಹಾಗೂ ಸಮಾಜಶಾಸ್ತ್ರ ಪರೀಕ್ಷೆಗಳು ನಡೆಯುತ್ತಿದ್ದು, ಇಡೀ ಪರೀಕ್ಷಾ ಅವಧಿಯಲ್ಲಿ ಗರಿಷ್ಟ ಸಂಖ್ಯೆಯ ವಿದ್ಯಾರ್ಥಿಗಳು (ಸುಮಾರು ಆರು ಲಕ್ಷ) ಪರೀಕ್ಷೆ ಎದುರಿಸುತ್ತಿರುವ ಬಗ್ಗೆ ಸಚಿವರು ಮಾಹಿತಿ ಪಡೆದರು.

ಇದೇ ಸಂದರ್ಭದಲ್ಲಿ ನ್ಯಾಷನಲ್‌ ಕಾಲೇಜಿನಲ್ಲಿ ಶಿಕ್ಷಣ ತಜ್ಞರಾದ ದಿ.ಎಚ್‌.ನರಸಿಂಹಯ್ಯ ಅವರು ಬಳಸುತ್ತಿದ್ದ ಕೊಠಡಿಗೆ ಭೇಟಿ ನೀಡಿದ ಸಚಿವರು ಅವರೊಂದಿಗಿನ ತಮ್ಮ ಆತ್ಮೀಯ ಒಡನಾಟವನ್ನು‌ ನೆನೆದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು