ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಮ್ಮಕ್ಕನ ಮನವಿಗೆ ಸ್ಪಂದಿಸಿದ ಸಿಎಂ: ಮರ ಕಡಿಯದಂತೆ ಅಧಿಕಾರಿಗಳಿಗೆ ಸೂಚನೆ 

Last Updated 3 ಜೂನ್ 2019, 10:51 IST
ಅಕ್ಷರ ಗಾತ್ರ

ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸೋಮವಾರ ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿದರು.

ಬಾಗೇಪಲ್ಲಿ- ಹಲಗೂರು ಮಾರ್ಗದಲ್ಲಿ ರಾಜ್ಯ ಹೆದ್ದಾರಿ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಮಾಗಡಿ ತಾಲ್ಲೂಕಿನ ಕುದೂರು ಗ್ರಾಮದಲ್ಲಿ ರಸ್ತೆ ಬದಿಯ ಮರಗಳನ್ನು ಕಡಿಯಲು ಮುಂದಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಕುಮಾರಸ್ವಾಮಿ, ರಸ್ತೆ ಬದಿಯ ಮರಗಳನ್ನು ಕಡಿಯದಂತೆ ಸೂಚಿಸಿದರು. ಅಗತ್ಯ ಬಿದ್ದಲ್ಲಿ ರಸ್ತೆಯ ಮಾರ್ಗವನ್ನು ಬದಲಿಸುವಂತೆ ಸೂಚಿಸಿದರು. ಇದೇ ಸಂದರ್ಭದಲ್ಲಿ ತಮ್ಮ ಗ್ರಾಮದಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಮನವಿ ಸಲ್ಲಿಸಿದರು.

ಉಪಮುಖ್ಯಮಂತ್ರಿ ಡಾ ಜಿ. ಪರಮೇಶ್ವರ ಉಪಸ್ಥಿತರಿದ್ದರು.

ವಿಕಲಚೇತನ ಮಹಿಳೆಯ ಸ್ವಾವಲಂಬನೆಗೆ ಮುಖ್ಯಮಂತ್ರಿ ನೆರವು
ಬೆಂಗಳೂರು:
ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಮಾಯಕ್ಕ ಎಂಬ ವಿಕಲಚೇತನ ಮಹಿಳೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸ್ವಯಂ ಉದ್ಯೋಗ ಕೈಗೊಳ್ಳಲು ₹50 ಸಾವಿರ ಮೊತ್ತದ ಚೆಕ್ ವಿತರಿಸಿದರು.
ಮಾಯಕ್ಕನ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿ ಪ್ರವೇಶ ನೀಡಲು ವ್ಯವಸ್ಥೆ ಮಾಡಲು ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿಯವರಗೆ ಮುಖ್ಯಮಂತ್ರಿಗಳು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT