ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಬರಿ ಮಲೆ ಪ್ರವೇಶ: ವಿವಾದ ಸೃಷ್ಟಿಸಿದ ಕೆಪಿಎಸ್‌ಸಿ ಪ್ರಶ್ನೆ

Last Updated 7 ಏಪ್ರಿಲ್ 2019, 20:15 IST
ಅಕ್ಷರ ಗಾತ್ರ

ತಿರುವನಂತಪುರ:ಎಲ್ಲ ವಯಸ್ಸಿನ ಮಹಿಳೆಯರಿಗೂ ಶಬರಿಮಲೆ ಅಯ್ಯಪ್ಪ ದೇವಸ್ಥಾನ ಪ್ರವೇಶಕ್ಕೆ ಸುಪ್ರೀಂ ಕೋರ್ಟ್‌ ಅವಕಾಶ ಕಲ್ಪಿಸಿದ ನಂತರ ದೇಗುಲ ಪ್ರವೇಶಿಸಿದ ಮೊದಲ ಮಹಿಳೆ ಯಾರು?

ಹೀಗೊಂದು ಪ್ರಶ್ನೆಯನ್ನು ಏಪ್ರಿಲ್‌ 3ರಂದು ನಡೆದ ಕೇರಳ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಪರೀಕ್ಷೆಯಲ್ಲಿ ಕೇಳಲಾಗಿತ್ತು.

ಮನೋವೈದ್ಯಶಾಸ್ತ್ರದ ವಿಭಾಗದ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಕ್ಕಾಗಿ ನಡೆದ ಪರೀಕ್ಷೆಯಲ್ಲಿ ಈ ಪ್ರಶ್ನೆ ಕೇಳಲಾಗಿದ್ದು, ಬಿಂದು ಮತ್ತು ಕನಕದುರ್ಗಾ ಸೇರಿದಂತೆ ಇನ್ನೆರಡು ಆಯ್ಕೆಗಳನ್ನು ನೀಡಲಾಗಿತ್ತು.

ಸುಪ್ರೀಂ ತೀರ್ಪಿನ ನಂತರ ಎಷ್ಟು ಮಹಿಳೆಯರು ದೇಗುಲ ಪ್ರವೇಶಿಸಿದ್ದಾರೆ ಎಂಬುದರ ಬಗ್ಗೆ ಕೇರಳ ಸರ್ಕಾರವೇ ಇದುವರೆಗೆ ಸ್ಪಷ್ಟ ಮಾಹಿತಿ ನೀಡಿಲ್ಲ. ಹಾಗಾಗಿ ಈ ಪ್ರಶ್ನೆ ವಿವಾದಕ್ಕೆ ಕಾರಣವಾಗಿದೆ.

‘ಇದು ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ ಪ್ರಶ್ನೆಯಾಗಿದೆ. ಪ್ರಶ್ನೆ ಪತ್ರಿಕೆ ಸಿದ್ಧತೆಯಲ್ಲಿ ಲೋಕಸೇವಾ ಆಯೋಗದ ನೇರ ಪಾತ್ರವಿಲ್ಲ. ತಜ್ಞರು ಮುಚ್ಚಿದ ಲಕೋಟೆಯಲ್ಲಿ ಪ್ರಶ್ನೆ ಪತ್ರಿಕೆ ನೀಡಿದ್ದಾರೆ’ ಎಂದು ಆಯೋಗದ ಮುಖ್ಯಸ್ಥ ಎಂ.ಕೆ. ಸಕೀರ್‌ ಸ್ಪಷ್ಟನೆ ನೀಡಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ, ಈ ವಿವಾದವನ್ನು ಚುನಾವಣಾ ಪ್ರಚಾರದ ಅಸ್ತ್ರವಾಗಿ ಬಳಸುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT